ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದ್ದು, ಮುಂದಿನ 5 ದಿನ ಗುಡುಗು- ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಸಂಜೆಯೂ ಸಹ ದಾವಣಗೆರೆ ಜಿಲ್ಲೆ ಮತ್ತು ರಾಜ್ಯದ ಕೆಲವು ಕಡೆ ಸಾಧಾರಣ ಮಳೆಯಾಗಿದೆ.
ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರದಲ್ಲಿ ಇಂದಿನಿಂದ (ಏ.22) ಐದು ದಿನ ಮಳೆಯಾಗಲಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ 4 ದಿನ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಏ.22 ಮತ್ತು ಏ.23ರಂದು ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗರಿಷ್ಠ ತಾಪಮಾನದಲ್ಲಿ ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.



