ಬೆಂಗಳೂರು: ರಾಜ್ಯದ ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ನಾಳೆ (ಏ.30) ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಮೈಸೂರು ಜಿಲ್ಲೆಗೆ ಇಂದು (ಏ.29) ಯೆಲ್ಲೊ ಅಲರ್ಟ್ ನೀಡಿದ್ದು, ಮಳೆಯಾಗಲಿದೆ.



