ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಬಿಸಿ ನಡುವೆಯೇ ವರುಣ ಅಬ್ಬರಿಸುತ್ತಿದ್ದಾನೆ. ಮೇ. 8ರಿಂದ 14ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಮೇ10ರಂದು ದಾವಣಗೆರೆಯಲ್ಲಿ ವರುಣ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 8 ಹಾಗೂ 9ರಂದು ಮಂಡ್ಯ, ದೊಡ್ಡಬಳ್ಳಾಪುರ, ಮೈಸೂರು, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಹಾವೇರಿ, ಉಡುಪಿ, ಬೆಂಗಳೂರು ನಗರ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಹುಬ್ಬಳ್ಳಿ, ವಿಜಯನಗರ, ಬಳ್ಳಾರಿ, ಉತ್ತರ ಕನ್ನಡ, ರಾಯಚೂರು, ಚಿತ್ರದುರ್ಗ, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಕೋಲಾರಲ್ಲಿ ಮಳೆಯಾಗಲಿದೆ.
ಮೇ 10ರಂದು ಬದಾವಣಗೆರೆ, ಕೊಡಗು ಜಿಲ್ಲೆಗಳಲ್ಲಿ ಮಳೆ ಆಗಲಿದ್ದು, ಮೇ 12, 13ರಂದು ಹಾಸನ, ಬಾಗಲಕೋಟೆ ದಕ್ಷಿಣ, ಮಂಡ್ಯ ದಕ್ಷಿಣ, ತುಮಕೂರು ದಕ್ಷಿಣ, ಮಂಡ್ಯ, ಚಾಮರಾಜನಗರದ ದಕ್ಷಿಣ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಕೊಡಗು, ಮೈಸೂರು ಪಶ್ಚಿಮ ಭಾಗ ಹಾಗೂ ಬೆಳಗಾವಿ ದಕ್ಷಿಣ, ಹಾವೇರಿಯಲ್ಲಿ ಮಳೆರಾಯ ಅಬ್ಬರಿಸಲಿದೆ.
ಮೇ 14ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿಯ ದಕ್ಷಿಣ, ಕೊಡಗು, ಹಾವೇರಿ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಹಾಸನದಲ್ಲಿ ಮಳೆ ಬೀಳುವ ಮಾಹಿತಿ ಲಭ್ಯವಾಗಿದೆ.



