Connect with us

Dvgsuddi Kannada | online news portal | Kannada news online

ಇಂದಿನಿಂದ ಮಳೆ ಮತ್ತಷ್ಟು ಚುರುಕು; 10 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಪ್ರಮುಖ ಸುದ್ದಿ

ಇಂದಿನಿಂದ ಮಳೆ ಮತ್ತಷ್ಟು ಚುರುಕು; 10 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಮೇ 30ರ) ಮಳೆಯ ತೀವ್ರತೆ ಮತ್ತಷ್ಟು ಚುರುಕಾಗಲಿದೆ. ಹೀಗಾಗಿ, ದಕ್ಷಿಣ ಒಳನಾಡಿನ ಹತ್ತು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದೆ. ಆದರೆ, ಅದಕ್ಕೂ ಮೊದಲೇ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 31 ಹಾಗೂ ಜೂನ್ 1ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ. ಹೀಗಾಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ ಜಿಲ್ಲೆಗಳಿಗೆ ಮೇ 31 ಹಾಗೂ ಜೂನ್ 1ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top