Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಐದು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮನ ಇಲಾಖೆ‌

ಪ್ರಮುಖ ಸುದ್ದಿ

ರಾಜ್ಯದಲ್ಲಿ ಐದು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮನ ಇಲಾಖೆ‌

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದಲ್ಲಿ ಕರ್ನಾಟಕದ ಒಳನಾಡಿನ ಮೂಲಕ ದಕ್ಷಿಣದ ತಮಿಳುನಾಡಿನವರೆಗೂ ಟ್ರಫ್ ಮುಂದುವರೆಯಲಿದೆ.

ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ 5 ದಿನ ಮಳೆಯಾಗಲಿದೆ. ಕರಾವಳಿಯ ಕೆಲವು ಕಡೆ 2 ರಿಂದ 3 ಸೆಂ.ಮೀ. ಮಳೆಯಾಗುವ ಸಾಧ್ಯತೆಗಳಿವೆ. ವಿಜಯನಗರ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆಗಳಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top