ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಇಂದು (ಜು.5) ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ವ್ಯಾಪಕ ಮಳೆಯಾಗಲುದ್ದು, ಈ ಜಿಲ್ಲೆಗಳ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ವಿಜಯಪುರ, ಗದಗ, ಕೊಪ್ಪಳ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಕೆಲವೆಡೆ 20 ಸೆಂ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ 6ರಂದು ಉತ್ತರ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ಬೆಳಗಾವಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.