ಬೆಂಗಳೂರು: ಅರಬ್ಬಿ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಾಳೆ (ಮಾ.13) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶುಕ್ರವಾರ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.



