ಬೆಂಗಳೂರು: ಬೇಸಿಗೆ ತಾಪಮಾನ ಹೆಚ್ಚಳ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮುಂದಿನ ಮೂರು ದಿನ ರಾಜ್ಯದಲ್ಲಿ ಹವಾಮಾನ ಇಲಾಖೆ ಮಳೆ ಮ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಾ.29ರಿಂದ ಮಾ.31ವರೆಗೆ ಮಳೆಯಾಗಲಿದೆ.
ಇನ್ನು ಮಾ.29ರಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿಯಲ್ಲಿ ಸಾಧಾರಣ ಮಳೆಯಾಗಲಿದೆ. ನಿನ್ನೆ (ಮಾ.28) ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗಿದೆ. ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾದಂತೆ ಅಕಾಲಿಕ ಮಳೆ ಬೀಳಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.



