Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಎರಡು ದಿನ ಮಳೆ; ಮೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಪ್ರಮುಖ ಸುದ್ದಿ

ರಾಜ್ಯದಲ್ಲಿ ಎರಡು ದಿನ ಮಳೆ; ಮೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ನೈಋತ್ಯ ಚಂಡಮಾರುತ ಅಬ್ಬರದಿಂದ ಕರ್ನಾಟಕದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಏ.14ರವರೆಗೆ ರಾಜ್ಯಾದ್ಯಂತ ಮಳೆಯಾಗಲಿದ್ದು, 3 ಜಿಲ್ಲೆಗಳಿಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ.  ಉತ್ತರ ಕರ್ನಾಟಕದಲ್ಲಿಯೂ ಗುಡುಗು ಸಹಿತ ಮಳೆಯಾಗಿದೆ. ನೈಋತ್ಯ ಚಂಡಮಾರುತದ ಅಬ್ಬರದಿಂದ ದಕ್ಷಿಣ ಭಾರತದ ಹಲವೆಡೆ ಇಂದಿನಿಂದ 3 ದಿನ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದ ಏ. 14ರವರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಬೆಳಗಾವಿ, ಧಾರವಾಡ, ವಿಜಯಪುರ, ಯಾದಗಿರಿ, ಕಲಬುರ್ಗಿಯಲ್ಲೂ ಇಂದಿನಿಂದ ಮಳೆ ಚುರುಕುಗೊಳ್ಳಲಿದೆ. ಶಿವಮೊಗ್ಗ, ಕೊಡಗಿನಲ್ಲೂ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ.

ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಹುಬ್ಬಳ್ಳಿ, ಯಲ್ಲಾಪುರ, ಶಿರಸಿ, ರಿಪ್ಪನ್​ಪೇಟೆ, ಹೊಸನಗರ, ತೀರ್ಥಹಳ್ಳಿ, ಸಾಗರ, ಭದ್ರಾವತಿ, ಬಾಳೆ ಹೊನ್ನೂರಿನಲ್ಲಿ ಮಳೆಯಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಲ್ಲಿ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಬಾಗಲಕೋಟೆ, ಹುಬ್ಬಳ್ಳಿ, ವಿಜಯಪುರದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಕಳಸ ಸುತ್ತಮುತ್ತ ನಿನ್ನೆ ಮಳೆಯಾಗಿದ್ದು, ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top