ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು, ನಾಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೆಚ್ಚರಿಕೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಏ.25 ವರೆಗೆ ಮಳೆಯಾಗುವ ನಿರೀಕ್ಷೆ ಇದೆ. ತುಮಕೂರು,ಮೈಸೂರು, ದಾವಣಗೆರೆ, ಚಿತ್ರದುರ್ಗ ಸಾಧಾರಣ ಮಳೆಯಾಗಲಿದೆ.



