ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನ ಕೆಲ ಜಿಲ್ಲೆಯಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಉತ್ತರ ಒಳನಾಡಿನಲ್ಲಿ ಬಿಸಿಲ ತಾಪಮಾನ ಹೆಚ್ಚಾಗುತ್ತಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿದಂತೆ ಹಲವೆಡೆ ಒಣಹವೆ ಇದ್ದರೂ ಕೂಡ ಮಳೆ ಬರುವ ಸಾಧ್ಯತೆ ಕೂಡ ಗಾಢವಾಗಿದೆ.
ಇನ್ನುಳಿದಂತೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಮತರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.



