ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಜ.7ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ 2 ದಿನ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನಲ್ಲಿ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದ್ದಾರೆ.



