ಬೆಂಗಳೂರು: ಮುಂದಿನ ಎರಡು ದಿನ ರಾಜ್ಯದ ದಕ್ಷಿಣ ಒಳನಾಡಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು,ಹಾಸನ, ಕೊಡಗು, ಮೈಸೂರು, ತುಮಕೂರಿನಲ್ಲಿ ಮಳೆಯಾಗಲಿದೆ.
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆಯಲಿದೆ.ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ವಿಜಯಪುರದಲ್ಲಿ 12.4 ಡಿಗ್ರಿಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.