ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.
ಕರ್ನಾಟಕದಲ್ಲಿ ಮಾರ್ಚ್ 24ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.



