Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಮುನ್ಸೂಚನೆ

ಡಿವಿಜಿ ಸುದ್ದಿ, ಬೆಂಗಳೂರು:  ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದೀಗ ಬಿಡುವು ನೀಡಿ ಒಂದು ವಾರದಲ್ಲಿ ಮತ್ತೆ ವರುಣ ಅರ್ಭಟಕ್ಕೆ ಸಜ್ಜಾಗಿದ್ದಾನೆ.

ಈಶಾನ್ಯ ಮಾರುತಗಳು ದಕ್ಷಿಣ ಭಾರತಕ್ಕೆ ಬುಧವಾರ ಪ್ರವೇಶಿಸಿದ್ದು, ತಮಿಳುನಾಡಿನ ಚೆನ್ನೈ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 2 ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅಕ್ಟೋಬರ್ 31, ನವೆಂಬರ್ 1 ಮತ್ತು 2 ರಂದು ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ ಭಾಗ, ಬೆಳಗಾವಿ, ಗದಗ, ವಿಜಯಪುರ, ರಾಯಚೂರು, ಹಾವೇರಿ, ಸೇರಿದಂತೆ ಹಲವೆಡೆ ಹಚ್ಚಿನ ಪ್ರಮಾಣದ ಮಳೆಯಾಗಲಿದೆ. ನಾಳೆಯಿಂದ ನವಂಬರ್ 2 ರವರೆಗೆ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಸಾಧಾರಣ ಚಳಿ ಇರಲಿದೆ. ರಾಜ್ಯದಲ್ಲಿ ಚಳಿಗಾಲದ ಕನಿಷ್ಠ ಉಷ್ಣಾಂಶ ಕಳೆದ ಬಾರಿಯಂತೆಯೇ ಇರಲಿದ್ದು, ಕೆಲವು ಕಡೆ ಹೆಚ್ಚಿನ ಚಳಿ ಇರಲಿದೆ. ಬೆಂಗಳೂರಿನಲ್ಲಿ 12 ರಿಂದ 14 ಡಿಗ್ರಿ ಉಷ್ಣಾಂಶ ಇರಲಿದೆ. ಕನಿಷ್ಠ ಉಷ್ಣಾಂಶ ಸ್ಥಳದಿಂದ ಸ್ಥಳಕ್ಕೆ ಬದಲಾವಣೆ ಆಗಲಿದೆ. ಬೀದರ್, ಕಲಬುರಗಿ, ವಿಜಯಪುರದಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿಗಿಂತ ಕಡಿಮೆ ಆಗಲಿದೆ. ಜೊತೆಗೆ ಬಾಗಲಕೋಟೆ, ರಾಯಚೂರು ಗದಗ ಸೇರಿದಂತೆ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top