ಬೆಂಗಳೂರು: ಜನವರಿ ತಿಂಗಳಿನಿಂದಲೇ ಜಾರಿಗೆ ಬರುವಂತೆ ರೇಷನ್ ಕಾರ್ಡ್ ಪ್ರತಿ ಸದಸ್ಯರಿಗೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ಈ ಕುರಿತು ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಆದೇಶ ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡಿದೆ. ಹೀಗಾಗಿ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಪ್ರತಿ ಸದಸ್ಯರಿಗೆ ಐದು ಕೆಜಿ ಅಕ್ಕಿ ಜತೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿ ವಿತರಿಸಲು ಕ್ರಮ ಕೈಗೊಂಡಿದೆ. ಈ ತಿಂಗಳಿನಿಂದಲೇ ಪಡಿತರ ಚೀಟಿದಾರರ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಣೆ ಆರಂಭವಾಗಲಿದೆ.



