ರಾಯಚೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಧಗ ಧಗನೆ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ಚಾಲಕ ಸಜೀವ ದಹನವಾದ ಘಟನೆ ತಾಲೂಕಿನ ಕಲ್ಮಲ ಸಮೀಪ ಸಂಭವಿಸಿದೆ. ಮೃತ ಕಾರು ಚಾಲಕನನ್ನು ಮಲ್ಲಟ ಗ್ರಾಮದ ಸದಾನಂದಗೌಡ ಮಾಲೀಪಾಟೀಲ (60) ಎಂದು ಗುರುತಿಸಲಾಗಿದೆ. Breaking news: ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ; ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು, ಲಾರಿ
ಮಲ್ಲಟದಿಂದ ರಾಯಚೂರು ಕಡೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡದಿದೆ. ಿದರ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಲೇ ಬೆಂಕಿ ಹೊತ್ತಿ ಉರಿದಿದೆ. ಕಾರು ಲಾಕ್ ಆಗಿರುವ ಕಾರಣ ಚಾಲಕ ಹೊರಬರಲು ಸಾಧ್ಯವಾಗಿಲ್ಲ ಎನ್ನಲಾಗಿದೆ.
ಗ್ರಾಮದಿಂದ ಸ್ವಲ್ಪ ದೂರದ್ಲಲಿ ಘಟನೆ ಸಂಭವಿಸಿದ್ದು ಬೆಂಕಿ ನಂದಿಸಲು ಸಾರ್ವಜನಿಕರಿಗೆ ಸಾಧ್ಯವಾಗಿಲ್ಲ. ಅಗ್ನಿ ಶಾಮಕದಳ ಬರುವ ವೇಳೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ಬಳಿಕ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.