Connect with us

Dvgsuddi Kannada | online news portal | Kannada news online

ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಿಸಿದವರಿಗೆ ಶಾಕ್ ; ಕಂದಾಯ ಇಲಾಖೆ ಸಭೆಯಲ್ಲಿ ಸಿಎಂ ನೀಡಿದ ಖಡಕ್ ಸೂಚನೆ ಏನು..?

ಪ್ರಮುಖ ಸುದ್ದಿ

ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಿಸಿದವರಿಗೆ ಶಾಕ್ ; ಕಂದಾಯ ಇಲಾಖೆ ಸಭೆಯಲ್ಲಿ ಸಿಎಂ ನೀಡಿದ ಖಡಕ್ ಸೂಚನೆ ಏನು..?

ಬೆಂಗಳೂರು:ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಿಸಿದವರಿಗೆ ಸರ್ಕಾರ ಶಾಕ್ ನೀಡಿದ್ದು, ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಬಂಧ ವಿಧಿಸಲು ಮುಂದಾಗಿದೆ. ಇದಲ್ಲದೆ, ಈಗಾಗಲೇ ನಿರ್ಮಿಸಿರುವ ಬಡಾವಣೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಕಂದಾಯ ಇಲಾಖೆ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ. ‌ಇನ್ಮುಂದೆ ಕಂದಾಯ ಜಮೀನಿನಲ್ಲಿ ಬಡಾವಣೆ ನಿರ್ಮಾಣಕ್ಕೆ ತಡೆ ನಿಡಬೇಕು. ಈಗಾಗಲೇ ಇರುವ ಬಡಾವಣೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ಇಲಾಖೆಯಲ್ಲಿ ಸರ್ವೇ ನಂಬರ್‌ಗಳಲ್ಲಿ ನಿರ್ಮಿಸಿದ ಅನಧಿಕೃತ ಬಡಾವಣೆಗಳು, ನಿವೇಶನಗಳ ದತ್ತಾಂಶ ಇದೆ. ಈ ಮಾಹಿತಿ ಆಧರಿಸಿ ಒಂದೇ ಯೋಜನೆಯಲ್ಲಿ ಅಂತಹ ಸ್ವತ್ತುಗಳಿಗೆ ಖಾತಾ ದಾಖಲೆಗಳನ್ನು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಹೇಳಿದರು.

ನಕಲಿ ದಾಖಲೆ ಸೃಷ್ಟಿಸಿ ನೋಂದಣಿಗೆ ಕಡಿವಾಣ: ಒಂದೇ ನಿವೇಶನವನ್ನು ಹಲವರಿಗೆ ಮಾರುವ ವಂಚನೆಗೆ ಕಡಿವಾಣ ಹಾಕಬೇಕು. ನಕಲಿ ದಾಖಲೆಗಳನ್ನು ಪರಿಶೀಲಿಸದೇ ಆಸ್ತಿ ನೋಂದಣಿ ಮಾಡಲಾಗುತ್ತದೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಕೆಲವು ಅಧಿಕಾರಿಗಳು ವಂಚಕರಿಗೆ ನೆರವಾಗುತ್ತಿದ್ದಾರೆ. ಇದಕ್ಕೂ ಕಡಿವಾಣ ಹಾಕಬೇಕು. ಖಾತೆ ಇಲ್ಲದೇ, ನಕಲಿ ದಾಖಲೆಗಳನ್ನು ಸೃಷ್ಟಿಸಿ ನೋಂದಣಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದರು.

ಖಾತಾ ವಿತರಣೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿದೆ. ಸ್ಥಳೀಯ ಸಂಸ್ಥೆಗಳು ಮತ್ತು ನೋಂದಣಿ ಇಲಾಖೆಯ ಸಹಕಾರದಿಂದ ಕೆಲಸ ಮಾಡಬೇಕು ಎಂದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಸುಮಾರು 30 ಲಕ್ಷ ಆಸ್ತಿಗಳಿಗೆ ಖಾತೆಗಳು ಇಲ್ಲ. ಗ್ರಾಮ ಪಂಚಾಯತಿಗಳಲ್ಲಿ ಅಂದಾಜು 90 ಲಕ್ಷ ಆಸ್ತಿಗಳು ಖಾತಾ ದಾಖಲೆಗಳನ್ನು ಹೊಂದಿಲ್ಲ. ಈ ದತ್ತಾಂಶ ಆಧರಿಸಿಯೇ ನೋಂದಣಿ ಪ್ರಕ್ರಿಯೆ ಮಾಡಬೇಕು ಎಂದರು.

ಸಭೆಯ ಚರ್ಚಿಸಿದ ಇತರೆ ಅಂಶಗಳು

  • ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆ ನಡೆಸಬೇಕು. ಫೆಬ್ರುವರಿ 10ರ ಒಳಗೆ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆ ಮುಗಿಸಬೇಕು
  • ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆ ಕಡ್ಡಾಯ
  • ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಕ್ರಮಬದ್ಧವಲ್ಲದ ಸ್ವತ್ತುಗಳ ನಕಲಿ ಖಾತೆಗಳನ್ನು ಸೃಜಿಸಿ ವಂಚನೆಯಿಂದ ಹೆಚ್ಚು ದಸ್ತಾವೇಜುಗಳ ನೋಂದಣಿ ಮಾಡುವ ಪ್ರಕ್ರಿಯೆಗೆ ಸಂಪೂರ್ಣ ಕಡಿವಾಣ ಹಾಕಬೇಕು
  • ಈ ವರ್ಷ ಡಿಸೆಂಬರ್‌ ಕೊನೆಗೆ 16,993 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 17ರಷ್ಟು ಹೆಚ್ಚುವರಿ ಪ್ರಗತಿ ಸಾಧಿಸಲಾಗಿದೆ
  • ಗ್ರಾಮ ಪಂಚಾಯತ್‌ಗಳಲ್ಲಿ 44 ಲಕ್ಷ ಆಸ್ತಿಗಳಿಗೆ ಮಾತ್ರ ಖಾತೆಯಿದೆ. ಇದರಿಂದ 800 ಕೋಟಿ ಆದಾಯ ಪ್ರತಿ ವರ್ಷ ಬರುತ್ತಿದೆ. ಆದರೆ, ಸುಮಾರು 90 ಲಕ್ಷ ಆಸ್ತಿಗಳಿಗೆ ಇನ್ನೂ ಖಾತಾ ಇಲ್ಲ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾತೆ ನೋಂದಣಿ ಪ್ರಕ್ರಿಯೆ ಸರಳಗೊಳಿಸುವ ಕುರಿತು ಕ್ರಮ

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top