Connect with us

Dvgsuddi Kannada | online news portal | Kannada news online

ಗ್ರಾಮ ಸಹಾಯಕರ ವೇತನ ಹೆಚ್ಚಳ‌ ಮಾಡಿ ಸರ್ಕಾರ ಆದೇಶ

ಪ್ರಮುಖ ಸುದ್ದಿ

ಗ್ರಾಮ ಸಹಾಯಕರ ವೇತನ ಹೆಚ್ಚಳ‌ ಮಾಡಿ ಸರ್ಕಾರ ಆದೇಶ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 9903 ಗ್ರಾಮ ಸಹಾಯಕರ ವೇತನವನ್ನು 2024ರ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಮಾಸಿಕ ರೂ.13,000/- ಗಳಿಂದ ರೂ.15,000/- ಗಳಿಗೆ ಹೆಚ್ಚಿನ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಕಂದಾಯ ಸಚಿವ ಕೃಷ್ಣಬೈರೇಗೌಡ, ಮಾಹಿತಿ ನೀಡಿದ್ದು, ಇಲಾಖೆಯಲ್ಲಿ ಹೆಚ್ಚುವರಿ ಗ್ರಾಮ ಸಹಾಯಕರ ನೇಮಕಾತಿಯ ಜೊತೆಗೆ ಅವರ ಗೌರವಧನವನ್ನೂ ಹೆಚ್ಚಿಸಲು ನಿರ್ಧರಿಸಲಾಗಿದೆ. ಗ್ರಾಮ ಸಹಾಯಕರಿಗೆ ಗೌರವಧನ ಹೆಚ್ಚಳ, ಸೇವಾ ಭದ್ರತೆ ಹಾಗೂ ‘ಡಿ ದರ್ಜೆ ನೌಕರರೆಂದು ಪರಿಗಣಿಸುವ ಸಂಬಂಧ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದರು.

ಗ್ರಾಮ ಸಹಾಯಕರಿಗೆ ಸೇವಾ ನಿಯಮಾವಳಿಯನ್ನು ರೂಪಿಸಿ ಸೇವಾ ಭದ್ರತೆಯನ್ನು ನೀಡುವ ಬಗ್ಗೆ ಇಲಾಖೆಯ ಹಂತದಲ್ಲಿ ಪರಿಶೀಲಿಸಿ, ಇದೇ ರೀತಿ ಗೌರವಧನ (ಸಂಚಿತ ವೇತನ) ಪಡೆಯುತ್ತಿರುವ ನೌಕರರುಗಳಿಗೆ ಇತರೆ ಇಲಾಖೆಗಳಲ್ಲಿ ಸೇವಾ ಭದ್ರತೆಗಾಗಿ ಯಾವ ರೀತಿ ನಿಯಮಾವಳಿ ರೂಪಿಸಿದ್ದಾರೆ ಎಂಬುದನ್ನು ಪರಿಶೀಲಿಸಿ ನಿರ್ದಿಷ್ಟ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಆರ್ಥಿಕ ಇಲಾಖೆ ತಿಳಿಸಿದೆ. ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸುವ ಪ್ರಸ್ತಾವನೆಯನ್ನು ಸಧ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲವೆಂದು ಆರ್ಥಿಕ ಇಲಾಖೆ ತಿಳಿಸಿದೆ. ಇದರಿಂದ ಕಾಯಂ ಮಾಡುವ ಬದಲು ವೇತನ ಹೆಚ್ಚಳ, ಇತರೆ ಸೌಲಭ್ಯಗಳ ಕಡೆಗೆ ಗಮನ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕಂದಾಯ ಇಲಾಖೆಯ ಕೆಲಸಗಳಿಗೆ ಮತ್ತಷ್ಟು ವೇಗ ನೀಡುವ ಹಾಗೂ ಜನರಿಗೆ ಸರಳ-ಸುಲಭ ಆಡಳಿತ ನೀಡುವ ನಿಟ್ಟಿನಲ್ಲಿ ಕಳೆದ ವಾರ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ನ್ಯಾಯ ಸಮ್ಮತವಾಗಿ ಪರೀಕ್ಷೆ ನಡೆಸಿ ಅರ್ಹರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೀಡಲಾಗಿದೆ.

ಕೆಲವು ದಿನಗಳ ಹಿಂದೆ ಕರ್ನಾಟಕದ ಗ್ರಾಮ ಸಹಾಯಕರು ಪ್ರತಿಭಟನೆ ನಡೆಸಿ ಸೇವೆ ಕಾಯಂ ಸೇರಿ ತಮ್ಮ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದರು. ಖುದ್ದು ಕೃಷ್ಣಬೈರೇಗೌಡ ಅವರೇ ಮನವಿ ಸ್ವೀಕರಿಸಿದ್ದರು. ಅಲ್ಲದೇ ಹಲವಾರು ವರ್ಷಗಳಿಂದಲೂ ಈ ಬೇಡಿಕೆಯಿತ್ತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top