Connect with us

Dvgsuddi Kannada | online news portal | Kannada news online

ಸರ್ವೇ ಇಲಾಖೆಯ ಸಮಸ್ಯೆ ಬಗೆಹರಿಸಲು ಕ್ರಮ; ಪರವಾನಗಿ ಪಡೆದ 100 ಖಾಸಗಿ ಸರ್ವೇಯರ್‌ , 35 ಎಡಿಎಲ್ ಆರ್ ನೇಮಕಾತಿ; ಕಂದಾಯ ಸಚಿವ

IMG 20240223 153422 1

ಪ್ರಮುಖ ಸುದ್ದಿ

ಸರ್ವೇ ಇಲಾಖೆಯ ಸಮಸ್ಯೆ ಬಗೆಹರಿಸಲು ಕ್ರಮ; ಪರವಾನಗಿ ಪಡೆದ 100 ಖಾಸಗಿ ಸರ್ವೇಯರ್‌ , 35 ಎಡಿಎಲ್ ಆರ್ ನೇಮಕಾತಿ; ಕಂದಾಯ ಸಚಿವ

ಬೆಂಗಳೂರು: ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಹಾಗೂ 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 100ಕ್ಕೂ ಅಧಿಕ ಪರವಾನಗಿ ಹೊಂದಿರುವ ಖಾಸಗಿ ಸರ್ವೇಯರ್‌ ಹಾಗೂ 35 ಎ.ಡಿ.ಎಲ್.ಆರ್ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಮುಂದಿನ 3 ರಿಂದ 6 ತಿಂಗಳ ಒಳಗಾಗಿ ಈ ಎಲ್ಲಾ ಹುದ್ದೆಗಳನ್ನೂ ನ್ಯಾಯಸಮ್ಮತವಾಗಿ ಭರ್ತಿ ಮಾಡುವಂತೆ ಕೆಪಿಎಸ್‌ಸಿ ಗೆ ಸೂಚಿಸಲಾಗಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ವಿಧಾನಸಭೆಯಲ್ಲಿ  ಮಾಹಿತಿ ನೀಡಿ, ಸರ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿದರೆ ಸ್ವಾಭಾವಿಕವಾಗಿ ಸರ್ವೇ ಇಲಾಖೆಗೆ ಬಲ ಬರಲಿದೆ. ಇದಲ್ಲದೆ, ಹೆಚ್ಚುವರಿ ಹೊಸ ಹುದ್ದೆಗಳ ಸೃಷ್ಟಿಗೂ ಮುಖ್ಯಮಂತ್ರಿಗಳ ಬಳಿ ಮನವಿ ಸಲ್ಲಿಸಿದ್ದು ಮತ್ತಷ್ಟು ಹುದ್ದೆಗಳನ್ನು ಸೃಷ್ಟಿಸಲು ಸರ್ಕಾರ ಸಿದ್ದವಾಗಿದೆ. ಇದರ ಜೊತೆಗೆ ನಮ್ಮ ಸಿಬ್ಬಂದಿಗಳ ಕೆಲಸದ ವೇಗ ಹೆಚ್ಚಾಗಲು ಮೂರು ಪಟ್ಟು ಸರ್ವೇ ಕೆಲದ ವೇಗ ಪಡೆಯಲು ಆಧುನಿಕ ಉಪಕರಣವಾದ ರೋವರ್‌ ಬಳಸಿ ಸರ್ವೇ ನಡೆಸಲೂ ಸೂಚಿಸಲಾಗಿದೆ. ಈ ಮೂಲಕ ರೈತರ ಸಮಸ್ಯೆಗಳನ್ನು ಬಗೆಹರಿಸುವ ಹಾಗೂ ಸರ್ವೇ ಇಲಾಖೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದರು.

ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ. ಅಲ್ಲದೆ, ಈ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನತಾ ದರ್ಶನ ಕಾರ್ಯಕ್ರಮದಲ್ಲೂ ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವ ವಿವರಿಸಿದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top