ಬೆಂಗಳೂರು: ಮುಂದಿನ ವರ್ಷದೊಳಗೆ ರಾಜ್ಯದ ಎಲ್ಲ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್ ವಿತರಿಸಲಾಗುವುದು. ಈಗಾಗಲೇ ಕೆಲ ಕಡೆ ಟ್ಯಾಬ್ ವಿತರಿಸಲಾಗಿದೆ. ಮುಂದಿನ ವರ್ಷ ಎಲ್ಲರಿಗೂ ವಿತರಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ ಅಥವಾ ಮೊಬೈಲ್ ನೀಡಬೇಕೆಂಬ ಬೇಡಿಕೆ ಇದ್ದು, ಕ್ಷೇತ್ರಗಳಲ್ಲಿ ಕೆಲಸ ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಲ್ಯಾಪ್ಟಾಪ್, ಮೊಬೈಲ್ ರೀತಿ ಕೆಲಸ ಮಾಡುವ ಟ್ಯಾಬ್ ನೀಡುವ ಕುರಿತಾಗಿ ಚಿಂತನೆ ನಡೆದಿದೆ. ಮುಂದಿನ ವರ್ಷ ಎಲ್ಲರಿಗೂ ಟ್ಯಾಬ್ ವಿತರಿಸಲಾಗುವುದು ಎಂದರು.



