ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್ ಟಿಇ) ಮಕ್ಕಳನ್ನು ಶಾಲೆಗೆ ಸೇರಿಸುವ ಅರ್ಜಿ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಮಾರ್ಚ್ 15 ರವರೆಗೆ ವಿದ್ಯಾರ್ಥಿಗಳ ಶಾಲಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಪೋಷಕರಿಗೆ ಮಾಹಿತಿ ನೀಡಿದೆ.
ಮಾರ್ಚ್ 18 ರಂದು ಅರ್ಜಿಗಳ ಪರಿಶೀಲನೆ ನಡೆಯಲಿದ್ದು, ಲಾಟರಿ ಪ್ರಕ್ರಿಯೆಗೆ ಅರ್ಹರಾದ ಅಂತಿಮ ಪಟ್ಟಿಯನ್ನು ಮಾರ್ಚ್ 25 ರಂದು ಪ್ರಕಟಿಸಲಾಗುತ್ತದೆ. ಏಪ್ರಿಲ್ 4ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದ್ದು, ಏಪ್ರಿಲ್ 16 ರೊಳಗೆ ಶಾಲೆಗೆ ದಾಖಲಾಗಬೇಕಿದೆ. ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಮೇ 4ರಂದು ಆನ್ ಲೈನ್ ಮೂಲಕ ಆರಂಭವಾಗಲಿದೆ.



