Connect with us

Dvgsuddi Kannada | online news portal | Kannada news online

ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತರಿಗೆ‌ ಗುಡ್ ನ್ಯೂಸ್; ಮೂರು ತಿಂಗಳು ವಿಶೇಷ ರೈಲು ಸಂಚಾರ

ರಾಜ್ಯ ಸುದ್ದಿ

ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತರಿಗೆ‌ ಗುಡ್ ನ್ಯೂಸ್; ಮೂರು ತಿಂಗಳು ವಿಶೇಷ ರೈಲು ಸಂಚಾರ

ಬೆಂಗಳೂರು: ರಾಜ್ಯದಿಂದ ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ಯಾತ್ರೆಗೆ ತೆರಳುವ ಭಕ್ತರರಿಗಾಗಿ ರೈಲ್ವೆ ಇಲಾಖೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಈ ವಿಶೇಷ ರೈಲು ಮೂರು ತಿಂಗಳ ಕಲ ಸಂಚರಿಸಲಿದೆ.

ಶಬರಿಮಲೆ ಋತುವಿನಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಿಸುವ ಉದ್ದೇಶದಿಂದ ಕೊಚುವೇಲಿ -ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್(ಎಸ್‌ಎಂವಿಟಿ) ಬೆಂಗಳೂರು ನಿಲ್ದಾಣಗಳ ನಡುವೆ ದಕ್ಷಿಣ ರೈಲ್ವೆ ವಿಶೇಷ ರೈಲುಗಳ ಸೇವೆಯನ್ನು ಕಲ್ಪಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.

ರೈಲು ಸಂಖ್ಯೆ 06083 ಕೊಚುವೇಲಿ- ಎಸ್‌ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್ಪ್ರೆಸ್ ವಿಷೇಶ ರೈಲು ಕೊಚುವೇಲಿ ನಿಲ್ದಾಣದಿಂದ ನವೆಂಬರ್ 12 ರಿಂದ ಜನವರಿ 28ರ ವರೆಗೆ ಪ್ರತಿ ಮಂಗಳವಾರ ಸಂಜೆ 6.05 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 10:55 ಕ್ಕೆ ಎಸ್‌ಎಂಐಟಿ ಬೆಂಗಳೂರು ತಲುಪಲಿದೆ.

  • ಕೊಚುವೇಲಿ -ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್(ಎಸ್‌ಎಂವಿಟಿ) ಬೆಂಗಳೂರು ನಿಲ್ದಾಣ ನಡುವ ವಿಶೇಷ ರೈಲು
  • ನ. 12 ರಿಂದ ಜನವರಿ 29ರ ವರೆಗೆ ಸಂಚಾರ
  • ಪ್ರತಿ ಮಂಗಳವಾರ ಸಂಜೆ 6.05 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 10:55 ಕ್ಕೆ ಎಸ್‌ಎಂಐಟಿ ಬೆಂಗಳೂರು ತಲುಪಲಿದೆ
  • ಪ್ರತಿ ಬುಧವಾರ ಮಧ್ಯಾಹ್ನ 12:45 ಕ್ಕೆ ಹೊರಟು ಮರುದಿನ ಬೆಳಗ್ಗೆ 6:45 ಕ್ಕೆ ಕೊಚುವೇಲಿ ತಲುಪಲಿದೆ

ರೈಲು ಸಂಖ್ಯೆ 06084 ಎಸ್‌ಎಂವಿಟಿ ಬೆಂಗಳೂರು -ಕೊಚುವೇಲಿ ಸಾಪ್ತಾಹಿಕ ಎಕ್ಸ್ಪ್ರೆಸ್ ವಿಶೇಷ ರೈಲು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಿಂದ ನವೆಂಬರ್ 13ರಿಂದ 2025 ರ ಜನವರಿ 29 ರವರೆಗೆ ಪ್ರತಿ ಬುಧವಾರ ಮಧ್ಯಾಹ್ನ 12:45 ಕ್ಕೆ ಹೊರಟು ಮರುದಿನ ಬೆಳಗ್ಗೆ 6:45 ಕ್ಕೆ ಕೊಚುವೇಲಿ ತಲುಪಲಿದೆ.

ಎರಡು ದಿಕ್ಕಿನ ಮಾರ್ಗದಲ್ಲಿ ಈ ರೈಲುಗಳು ಕೊಲ್ಲಂ, ಕಾಯಕುಳಂ, ಚೆಂಗನೂರು, ಪಾಲಕ್ಕಾಡ್, ಪದನೂರು, ಈರೋಡ್, ಸೇಲಂ, ಜೋಲಾರ್ ಪೇಟ್ ಜಂಕ್ಷನ್ ಗಳಲ್ಲಿ ನಿಲುಗಡೆಯಾಗಲಿದೆ. ಶಬರಿಮಲೆಗೆ ತೆರಳುವ ಭಕ್ತರು ಚೆಂಗನೂರು ಬಳಿ ಇಳಿದು ಅಲ್ಲಿಂದ ಪಂಪಾಗೆ ಬಸ್ ಮೂಲಕ ಪ್ರಯಾಣಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ www.enquiry.indianrail.gov.in ಅಧಿಕೃತ ರೈಲ್ವೆ ವೆಬ್ಸೈಟ್ ಗೆ ಭೇಟಿ ನೀಡಿ, NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಸಮಯ ಪರಿಶೀಲಿಸಬಹುದಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top