ಬೆಂಗಳೂರು: 2022 ನೇ ವರ್ಷದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಶೇ. 70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಇಲಾಖೆಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಅರ್ಜಿ ಸಲ್ಲಿಸಲು ಫೆ.9 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ಸಹಾಯವಾಣಿ 8050770004 ಬೆಳಗ್ಗೆ 10 ರಿಂದ ಸಂಜೆ 5-30 ಗಂಟೆವರೆಗೆ ಸಂಪರ್ಕಿಸಬಹುದು.



