ಬೆಂಗಳೂರು: ಕೋವಿಡ್ ಸೋಂಕು ಹಿನ್ನೆಲೆ ರಾಜ್ಯವ್ಯಾಪಿ ಶಾಲೆಗಳನ್ನು ಬಂದ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಶಾಲೆಗಳನ್ನು ಬಂದ್ ಮಾಡಿದ್ದೇವೆ. ರಾಜ್ಯದ ವಿವಿಧ ಜಿಲ್ಲಯಲ್ಲಿ ಈ ಪರಿಸ್ಥಿತಿ ಇಲ್ಲ. ಸೋಂಕಿ ಹೆಚ್ಚಿರುವ ಜಿಲ್ಲೆಯಲ್ಲಿ ಆನ್‌ಲೈನ್ ತರಗತಿ ನಡೆಯಲಿದೆ ಎಂದು ತಿಳಿಸಿದರು.
ತಾಲೂಕು ಮಟ್ಟದಲ್ಲಿ ಸೋಂಕು ಹೆಚ್ಚಿದಲ್ಲಿ ಶಾಲೆಯನ್ನು ಬಂದ್ ಮಾಡುವ ಬಗ್ಗ ಆಯಾ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಾಲೆಗಳಿಂದ ಕೋವಿಡ್ ಹರಡುತ್ತಿದೆ ಎಂದು ಯಾವ ಅಧ್ಯಯನ ವರದಿ ಕೂಡ ಇಲ್ಲ. ಯಾವುದಾದರೂ ಶಾಲೆಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡರೆ ಆ ಶಾಲೆಯನ್ನು ತಾತ್ಕಾಲಿಕವಾಗಿ ನಾಲ್ಕು ದಿನ ಬಂದ್ ಮಾಡಲಾಗುವುದು. ಆದರೆ ಇಡಿ ರಾಜ್ಯದಲ್ಲಿ ಶಾಲಾ ತರಗತಿ ಬಂದ್ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.



