ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು (ಏ.10) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (Karnataka School Examination and Assessment Board -KSEAB) ಪ್ರಕಟಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ಮಂಡಳಿಯ ಅಧ್ಯಕ್ಷೆ ಎನ್. ಮಂಜುಶ್ರೀ, ಪರೀಕ್ಷಾ ವಿಭಾಗದ ನಿರ್ದೇಶಕ ಗೋಪಾಲಕೃಷ್ಣ ಸೇರಿ ಹಿರಿಯ ಅಧಿಕಾರಿಗಳು ಫಲಿತಾಂಶವನ್ನು ಘೋಷಣೆ ಮಾಡಿದ್ದಾರೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ (84.87%) ಮೇಲುಗೈ ಸಾಧಿಸಿದ್ದಾರೆ. ಬಾಲಕರು 76.98% ಮಂದಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗ 89.96% , ವಾಣಿಜ್ಯ ವಿಭಾಗ 80.94%, ಕಲಾ ವಿಭಾಗದಲ್ಲಿ 68.36 % ಫಲಿತಾಂಶ ಬಂದಿದೆ. 35 ಕಾಲೇಜುಗಳಿಗೆ ಈ ಬಾರಿ ಶೂನ್ಯ ಫಲಿತಾಂಶ ಬಂದಿದೆ. ಒಟ್ಟಯ 463 ಕಾಲೇಜುಗಳಲ್ಲಿ ಶೇ. 100% ಫಲಿತಾಂಶ ಬಂದಿದ್ದು, ಅದರಲ್ಲಿ 91 ಸರ್ಕಾರಿ ಕಾಲೇಜುಗಳಲ್ಲಿ ಶೇ.100% ಫಲಿತಾಂಶ ಬಂದಿದೆ.
ಈ ಬಾರಿ ಕೂಡ ದಕ್ಷಿಣ ಕನ್ನಡ (97.37%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (96.80%) ಎರಡನೇ ಸ್ಥಾನ ಪಡೆದಿದೆ. ವಿಜಯಪುರ (94.89%) ತೃತೀಯ ಸ್ಥಾನ ಪಡೆದಿದೆ. ದಾವಣಗೆರೆ (80.96) 21 ನೇ ಸ್ಥಾನ ಪಡೆದಿದ್ದು, ಗದಗ (72.86%) ಕೊನೆಯ ಸ್ಥಾನ ಪಡೆದಿದೆ.
ಜಿಲ್ಲೆಗಳ ಶೇಕಡಾವಾರು ಫಲಿತಾಂಶ:
1. ದಕ್ಷಿಣ ಕನ್ನಡ 97.37
2. ಉಡುಪಿ 96.80
3. ವಿಜಯಪುರ 94.89
4. ಉತ್ತರ ಕನ್ನಡ 92.51
5. ಕೊಡಗು 92.13
6. ಬೆಂಗಳೂರು ದಕ್ಷಿಣ 89.57
7. ಬೆಂಗಳೂರು ಉತ್ತರ 88.67
8. ಶಿವಮೊಗ್ಗ 88.58
9. ಚಿಕ್ಕಮಗಳೂರು 88.20
10. ಬೆಂಗಳೂರು ಗ್ರಾಮಾಂತರ 87.55
11. ಬಾಗಲಕೋಟೆ 87.54
12. ಕೋಲಾರ 86.12
13. ಹಾಸನ 85.83
14. ಚಾಮರಾಜನಗರ 84.99
15. ಚಿಕ್ಕೋಡಿ 84.10
16. ರಾಮನಗರ 83.58
17. ಮೈಸೂರು 83.13
18. ಚಿಕ್ಕಬಳ್ಳಾಪುರ 82.84
19. ಬೀದರ್ 81.69
20. ತುಮಕೂರು 81.03
21. ದಾವಣಗೆರೆ 80.96
22. ಕೊಪ್ಪಳ 80.83
23. ಧಾರವಾಡ 80.70
24. ಮಂಡ್ಯ 80.56
25. ಹಾವೇರಿ 78.3626. ಯಾದಗಿರಿ 77.29
27. ಬೆಳಗಾವಿ 77.20
28. ಕಲಬುರಗಿ 75.48
29. ಬಳ್ಳಾರಿ 74.70
30. ರಾಯಚೂರು 73.11
31. ಚಿತ್ರದುರ್ಗ 72.92
32. ಗದಗ 72.86
ಕಲಾ ವಿಭಾಗದಲ್ಲಿ ಬೆಂಗಳೂರಿನ ಎನ್ಎಂಕೆಆರ್ ವಿ ಕಾಲೇಜಿನ ಮೇದಾ ಡಿ 596 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರು ವಿದ್ಯಾನಿಧಿ ಕಾಲೇಜಿನ ಗಾನವಿ 597 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಧಾರವಾಡದ ವಿದ್ಯಾನಿಕೇತನ್ ಎಸ್ಇಪಿಯು ಕಾಲೇಜಿನ ಎ ವಿದ್ಯಾಲಕ್ಷ್ಮಿ 598 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ.
ಮಾರ್ಚ್ 1ರಿಂದ 22ರವರೆಗೆ ರಾಜ್ಯದ 1120ಕ್ಕೂ ಹೆಚ್ಚು ಕೇಂದ್ರಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು.