ದಾವಣಗೆರೆ: ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ 2023 ನೇ ಸಾಲಿನ ‘ವಿಶೇಷ ವ್ಯಕ್ತಿ’ ಪ್ರಶಸ್ತಿಯನ್ನು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪಗೆ ಪ್ರದಾನ ಮಾಡಲಾಯಿತು. ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ , ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಉಪ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ತ್ಯಾಗರಾಜ್ ಭಾಗಿಯಾಗಿದ್ದರು.
ಇದೇ ವೇಳೆ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹಾಗೂ ವಿಶೇಷ ವ್ಯಕ್ತಿ ಪ್ರಶಸ್ತಿಯನ್ನು ಶಾಮನೂರು ಶಿವಶಂಕರಪ್ಪ ಸೇರಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದರು. ಇದೇ ವೇಳೆ 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆ ಮಾಡಲಾಯಿತು.



