ಶಿವಮೊಗ್ಗ: 2025-26ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ಜ.20 ರಿಂದ ಜ. 30 ಪ್ರತಿ ದಿನ 500 ಕ್ಯೂಸಕ್ಸ್ ನಂತೆ ಹಾಗೂ ಜ. 31 ರಂದು 300 ಕ್ಯೂಸೆಕ್ಸ್ ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು.
ದಾವಣಗೆರೆ: ತಪ್ಪು ಮಾಡಿದ್ರೆ ಕಾನೂನು ಕ್ರಮಕ್ಕೆ ಸಿದ್ಧ; ದಾದಾಗಿರಿಗೆ ಬಗ್ಗುವುದಿಲ್ಲ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ
ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



