Connect with us

Dvgsuddi Kannada | online news portal | Kannada news online

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

ಪ್ರಮುಖ ಸುದ್ದಿ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023ರಿಂದ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್​ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಕರ್ನಾಟಕದ ಹಿರಿಯ ರಾಜಕಾರಣಿ ಆಗಿದ್ದ ಅವರು, 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದರು. ‌ನಂತರ ಮಹಾರಾಷ್ಟ್ರ ರಾಜ್ಯಪಾಲ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

2004ರ ಬರಗಾಲದಲ್ಲಿ ಯಶಸ್ವಿಯಾಗಿ ಎಸ್ ಎಂ ಕೃಷ್ಣ ಸರ್ಕಾರ ಮುನ್ನಡೆಸಿದರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2027 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು

1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರು ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದರು. ಆ ಸಂದರ್ಭದಲ್ಲಿ ಎಸ್​ಎಂ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್​​ಗೆ ಶಕ್ತಿ ತುಂಬಿತ್ತು.

2004 ರ ಡಿಸೆಂಬರ್​​​ನಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಕೃಷ್ಣ 2008 ರ ಮಾರ್ಚ್​ 5 ರಂದು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ರಾಜ್ಯಸಭೆಗೆ ಆಯ್ಕೆಯಾದ ಅವರು 2009 ರ ಮೇ 22ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top