Connect with us

Dvgsuddi Kannada | online news portal | Kannada news online

ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ; ರೈತರ ಪಂಪ್ ಸೆಟ್ ಗಳಿಗೆ ಹಗಲಿನಲ್ಲಿ ವಿದ್ಯುತ್

solar park

ಕೃಷಿ ಖುಷಿ

ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ; ರೈತರ ಪಂಪ್ ಸೆಟ್ ಗಳಿಗೆ ಹಗಲಿನಲ್ಲಿ ವಿದ್ಯುತ್

ಹಾನಗಲ್: ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಲಾಗುವುದು.‌ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

7 ಗಂಟೆ ತ್ರೀ‌ ಫೇಸ್ ವಿದ್ಯುತ್

ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಬೆರವೇರಿಸಿ ಮಾತನಾಡಿದರು. ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ‌ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳ

ರೈತರಿಗಾಗಿ ಹಾಲಿನ ಬೆಲೆ ಹೆಚ್ಚಳ ಮಾಡಿದ್ದೇವೆ. ಈ ಹಣವನ್ನು ಸರ್ಕಾರ ಏನಾದರೂ ತೆಗೆದುಕೊಂಡಿದೆಯೇ? ಇದನ್ನು ರೈತರಿಗೆ ನೀಡಿದ್ದೇವೆ. 30 ಸಾವಿರವಿದ್ದ 10 ಗ್ರಾಂ ಚಿನ್ನದ ಬೆಲೆ 1 ಲಕ್ಷಕ್ಕೆ ಏರಿದೆ. ದಿನಸಿ ವಸ್ತುಗಳು, ಕಬ್ಬಿಣ, ಸಿಮೆಂಟ್ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಾದಾಗ ಬಿಜೆಪಿಯವರು ಆಕ್ರೋಶ ವ್ಯಕ್ತಪಡಿಸಲಿಲ್ಲ. ಈಗ ಕಾಂಗ್ರೆಸ್ ಮೇಲೆ ಆಕ್ರೋಶವಂತೆ. ಅವರು ಯಾವಾಗ ನಮ್ಮ ಮೇಲೆ ಆಕ್ರೋಶ ವ್ಯಕ್ತಪಡಿಸಿದರೋ ಅದೇ ದಿನ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿತು. ಅಧಿಕಾರದಲ್ಲಿ ಇರುವ ನಾವು ನಿಮ್ಮ ನೆರವಿಗೆ ನಿಲ್ಲಬೇಕೆ ಹೊರತು ಪಿಕ್ ಪಾಕೆಟ್ ಮಾಡಲು ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ವಿರೋಧ ಮಾಡುತ್ತಿದ್ದ ಬಿಜೆಪಿಯವರು ನಂತರ ಮಹಾರಾಷ್ಟ್ರ, ಹರಿಯಾಣ, ಮಧ್ಯಪ್ರದೇಶ, ದೆಹಲಿ ಚುನಾವಣೆಯಲ್ಲಿ ಅವರೂ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ದೇಶದ ಪ್ರಧಾನಿ ಕರ್ನಾಟಕ ಬರಿದಾಗಿ ಹೋಯಿತು ಎಂದರು‌. ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಕೊಟ್ಟು ರಾಜ್ಯದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಗ್ಯಾರಂಟಿಗಳಿಂದ ಪ್ರತಿಯೊಂದು ಕುಟುಂಬ 5-6 ಸಾವಿರ ಉಳಿತಾಯ ಮಾಡುತ್ತಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕೃಷಿ ಖುಷಿ

To Top