ದಾವಣಗೆರೆ: 2024 ನೇ ಸಾಲಿನ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್‍ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕ ಹರ್ಷ ತಿಳಿಸಿದ್ದಾರೆ.
ಶುಲ್ಕ ಮರು ಪಾವತಿಗೆ ಅರ್ಜಿ ಸಲ್ಲಿಸಿ
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರು ಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್‍ಲೈನ್ ಮೂಲಕ ಡಿ.3 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಿ.



