ಬೆಂಗಳೂರು: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTC ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ವೇಳೆ ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಮನೆಗೆ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಬೇಕು. ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲೂ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರದ ಬಳಿ ಬಸ್ ಹತ್ತಲು ಹಾಗೂ ಇಳಿಯಲು ಕೂಡ ಅವಕಾಶ ಮಾಡಲಾಗುವುದು. ಈಗಾಗಲೇ ಎಲ್ಲಾ ನಿಯಮಗಳನ್ನು ಪಾಲಿಸುವಂತೆ ಬಸ್ ಚಾಲಕ ನಿರ್ವಾಹಕರುಗಳಿಗೆ ಸೂಚಿಸಲಾಗಿದೆ. ಇನ್ನೂ ಪರೀಕ್ಷಾ ಕೇಂದ್ರದ ಬಳಿಯೇ ನಿಲುಗಡೆಗೆ ಸೂಚಿಸಲಾಗಿದೆ.