Connect with us

Dvgsuddi Kannada | online news portal | Kannada news online

SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ KSRTC ಬಸ್ ನಲ್ಲಿ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ

ಪ್ರಮುಖ ಸುದ್ದಿ

SSLC ಪರೀಕ್ಷೆ: ವಿದ್ಯಾರ್ಥಿಗಳಿಗೆ KSRTC ಬಸ್ ನಲ್ಲಿ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು:  SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ  KSRTC ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ವೇಳೆ ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಪರೀಕ್ಷಾ ಕೇಂದ್ರಗಳಿಗೆ ಹೋಗುವಾಗ ಹಾಗೂ ಮನೆಗೆ ಹಿಂತಿರುಗುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಬೇಕು.  ಹೊರವಲಯ ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲೂ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರದ ಬಳಿ ಬಸ್ ಹತ್ತಲು ಹಾಗೂ ಇಳಿಯಲು ಕೂಡ ಅವಕಾಶ ಮಾಡಲಾಗುವುದು. ಈಗಾಗಲೇ ಎಲ್ಲಾ ನಿಯಮಗಳನ್ನು ಪಾಲಿಸುವಂತೆ ಬಸ್ ಚಾಲಕ ನಿರ್ವಾಹಕರುಗಳಿಗೆ ಸೂಚಿಸಲಾಗಿದೆ. ಇನ್ನೂ ಪರೀಕ್ಷಾ ಕೇಂದ್ರದ ಬಳಿಯೇ ನಿಲುಗಡೆಗೆ ಸೂಚಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top