Connect with us

Dvgsuddi Kannada | online news portal | Kannada news online

SSLC, PUC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

IMG 20230512 184414

ಪ್ರಮುಖ ಸುದ್ದಿ

SSLC, PUC ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ‘ಪ್ರತಿಭಾ ಪುರಸ್ಕಾರ’ ವನ್ನು ನೀಡಿ ಗೌರವಿಸಲಾಗುತ್ತಿದೆ. 2023ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚು ಅಂಕಗಳಿಸಿರುವ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು ನಮ್ಮ ಸಂಘದಿಂದ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

  • ಸೂಚನೆಗಳು;
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ರಾಜ್ಯ ಸರ್ಕಾರಿ ನೌಕರರಾಗಿರಬೇಕು ಹಾಗೂ ಸರ್ಕಾರಿ
    ನೌಕರರ ಸಂಘದ ಸದಸ್ಯರಾಗಿರಬೇಕು
  • ಸಂಘದಿಂದ ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ
    ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರಿಂದ
    ದೃಢೀಕರಿಸಿ ಸಲ್ಲಿಸುವುದು
  • ನಿಗಮ, ಮಂಡಳಿ, ಪಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ
    ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ
  • ನಮೂನೆ ಹಾಗೂ ಅಗತ್ಯ ದಾಖಲೆಗಳಿಲ್ಲದಿದ್ದಲ್ಲಿ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2023
    Online link: https://bit.ly/ksgeapp2023
    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22354783/84, 9902135813 ಸಂರ್ಪಕಿಸುವುದು

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top