Connect with us

Dvgsuddi Kannada | online news portal | Kannada news online

SSLC ಫಲಿತಾಂಶ; 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಚಿತ್ರದುರ್ಗ ಜಿಲ್ಲೆ ಪ್ರಥಮ, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ..!

ಪ್ರಮುಖ ಸುದ್ದಿ

SSLC ಫಲಿತಾಂಶ; 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ; ಚಿತ್ರದುರ್ಗ ಜಿಲ್ಲೆ ಪ್ರಥಮ, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ..!

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022-23ನೇ ಸಾಲಿನ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು,ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು ಶೇ. 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ಒಟ್ಟು 8,35,102 ವಿದ್ಯಾರ್ಥಿಗಳ ಪೈಕಿ 7,00,619 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 3,41,108 ಬಾಲಕರು ಹಾಗೂ 3,59,511 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಎಸ್‌ ಎಸ್‌ ಎಲ್‌ ಸಿಯಲ್ಲಿ ಟಾಪರ್ಸ್‌ ಆದ ವಿದ್ಯಾರ್ಥಿಗಳು:

  • 625 – ಅನುಪಮ ಶ್ರೀಶೈಲ್ ಹಿರಿಹೋಳಿ, ಶ್ರೀಕಂಠೇಶ್ವರ ಪ್ರೌಢಶಾಲೆ, ಸೌದತ್ತಿ, ಬೆಳಗಾವಿ ಜಿಲ್ಲೆ
  • 625- ಭೀಮನಗೌಡ ಹನುಮಂತ ಗೌಡ ಬೀರಾದರ್ ಪಾಟೀಲ್, ಆಕ್ಸ್‌ಫರ್ಡ್‌ ಇಂಗ್ಲೀಷ್‌ ಹೈಸ್ಕೂಲ್, ಮುದ್ದೆಬೀಹಾಳ
  • 625 – ಯಶಸ್ಸ್ ಗೌಡ, ಬಾಲಗಂಗಾಧರ ಸ್ವಾಮಿ ಹೈಸ್ಕೂಲ್ ಚಿಕ್ಕಬಳ್ಳಾಪುರ
  • 625- ಭೂಮಿಕ ಪೈ, ನ್ಯೂ ಮೆಕಾಲೆ ಇಂಗ್ಲೀಷ್ ಸ್ಕೂಲ್, ಹೊಸೂರು ರೋಡ್ , ಬೆಂಗಳೂರು

ಈ ಬಾರಿ ಚಿತ್ರದುರ್ಗ ಜಿಲ್ಲೆ ಶೇಕಡಾ 96.08ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆ ಎರಡನೇ ಸ್ಥಾನ ಪಡೆದಿದ್ದು, ಹಾಸನ ಜಿಲ್ಲೆ ಮೂರನೇ ಸ್ಥಾನ ಗಳಿಸಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. karresults.nic.in ವೆಬ್​​​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top