ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯು 2020-21ನೇ ಸಾಲಿನ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.60 ರಿಂದ 74.99 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡುವ ಸರ್ಕಾರ ನಿರ್ಧರಿಸಿದೆ. ಕುರಿತು ಕರ್ನಾಟಕ ಪ್ರೌಡ ಶಿಕ್ಷಣ ಮಂಡಳಿಯಿಂದ ಮಾಹಿತಿ ಪಡೆದು, ಅರ್ಹ ವಿದ್ಯಾರ್ಥಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಪ್ರೋತ್ಸಾಹಧನ ಜಮೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಆದರೆ, 2019-20 ಹಾಗೂ 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಸಿಬಿಎಸ್‍ಇ/ಐಸಿಎಸ್‍ಇ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಬ್ಯಾಂಕ್ ಉಳಿತಾಯ ಖಾತೆಗೆ ಆಧಾರ್ ಲಿಂಕ್ ಮಾಡಿಸಿ, ಸೂಕ್ತ ದಾಖಲೆಗಳೊಂದಿಗೆ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.