ದಾವಣಗೆರೆ: 2020-21ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀಮತಿ ಇಂದಿರಾಗಾಂಧಿ/ಡಾ.ಬಿ.ಆರ್ ಅಂಬೇಡ್ಕರ್/ಪ.ಜಾತಿ/ಪ.ವರ್ಗ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ-ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಈ ಹಿಂದೆ ಅರ್ಜಿ ಆಹ್ವಾನಿಸಿ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.
ಇದೀಗ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಏ.03 ರಂದು ಬೆಳಿಗ್ಗೆ 11 ಗಂಟೆಗೆ ವೆಬ್‍ಸೈಟ್ http://kea.kar.nic.in ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ಇವರಿಂದ ಪ್ರಕಟಿಸಲಾಗುವುದು. ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆ ಪಡೆದ ಅಭ್ಯರ್ಥಿಗಳು ಏ.05 ರಿಂದ 10 ರವರೆಗೆ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸಂಬಂಧಿಸಿದ ವಸತಿ ಶಾಲೆಗೆ ತಪ್ಪದೇ ಪ್ರವೇಶ ಪಡೆಯುವುದು.
ಆಯ್ಕೆ ಪ್ರಕ್ರಿಯೆಯು ಆನ್‍ಲೈನ್ ಮೂಲಕ ಮೆರಿಟ್ ಮತ್ತು ರೋಸ್ಟರ್ ಆಧಾರಿತವಾಗಿರುವುದರಿಂದ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ವೆಬ್‍ಸೈಟ್ http://kea.kar.nic.in ನ್ನು ಸಂಪರ್ಕಿಸಬಹುದು. ಜಿಲ್ಲಾ ಹಂತದಲ್ಲಿ ಯಾವುದೇ ರೀತಿಯ ಆಯ್ಕೆ ಪ್ರಕ್ರಿಯೆ ಇರುವುದಿಲ್ಲವೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.



