ಮೂಡುಬಿದಿರೆ: ಶೈಕ್ಷಣಿಕ, ಕ್ರೀಡೆ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹ ಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತುರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ ಈ ಬಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿಯೇ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನ ನೀಡುವುದಾಗಿ ಫೋಷಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರು, 10ನೇ ತರಗತಿ (ಎಸ್ಸೆಸ್ಸೆಲ್ಸಿ)ಯಲ್ಲಿ ಸಿಬಿಎಸ್‌ಇ , ಐಸಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆ ಯಲು ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ವಿದ್ಯಾರ್ಥಿಗಳು ಅತ್ಯುತ್ತಮ ಮತ್ತು ಪರಿಣಾಮಕಾರಿ ಪದವಿಪೂರ್ವ ಶಿಕ್ಷಣವನ್ನು ಆಳ್ವಾಸ್ ಪದವಿ ಪೂರ್ವ ಕಾಲೇಜಿನಿಂದ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಷಯಗಳಲ್ಲಿ ಪಡೆಯಬಹುದು.
ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನ ವಿಷಯಗಳ ಕುರಿತು 120 ನಿಮಿಷಗಳ ಪರೀಕ್ಷೆಯು ಅಕ್ಟೋಬರ್ 15, 2024ರಂದು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಶ್ನೆಪತ್ರಿಕೆ ಇರಲಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅ.12, 2024 ಕೊನೆಯ ದಿನವಾಗಿರುತ್ತದೆ ಎಂದು ತಿಳಿಸಿದರು.
ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದಲ್ಲಿ ಮತ್ತು ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯಲಿವೆ. ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಸಮಾಲೋಚನೆ ನಡೆಸಲಾಗುವುದೆಂದರು. ವಿದ್ಯಾರ್ಥಿಗಳು https://scholarship.alvas.org/puc/login.php ವೆಬ್ ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 636633727/6366377827/6366377825 ಸಂಪರ್ಕಿಸಬಹುದಾಗಿದೆ.