ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ ರಾಜ್ಯಪಾಲ ಥಾವತ್ ಚಂದ್ ಗೆಹಲೋತ್ ಅವರು ಸಿದ್ದರಾಮಯ್ಯ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಬೋಧಿಸಿದ್ದಾರೆ. ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿಕೆ ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
#WATCH | Senior Congress leader Siddaramaiah takes oath as the Chief Minister of Karnataka in Bengaluru. pic.twitter.com/S90btY2N6z
— ANI (@ANI) May 20, 2023
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದು, ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ದೇಶದ ಹಲವು ರಾಜ್ಯಗಳು ಮುಖ್ಯಮಂತ್ರಿಗಳು, ಹಲವು ಗಣ್ಯರು ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಡಾ.ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಎಂಬಿ ಪಾಟೀಲ್ ಸೇರಿದಂತೆ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
DK Shivakumar takes oath as the Deputy Chief Minister of Karnataka in Bengaluru. pic.twitter.com/OSGc7ck4tV
— ANI (@ANI) May 20, 2023
ಡಾ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಕೆಜೆ ಜಾರ್ಜ್ ಮತ್ತು ಎಂಬಿ ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದಂತೆ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಪುತ್ರ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು. ಇನ್ನು ಚಾಮರಾಜಪೇಟೆ ಶಾಸಕ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾಹ್ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
- ಪ್ರಮಾಣವಚನ ಸ್ವೀಕರಿಸಿದ 8 ಸಚಿವರ ವಿವರ
- ಎಂ. ಬಿ. ಪಾಟೀಲ್ (ಲಿಂಗಾಯತ)
- ಡಾ. ಜಿ. ಪರಮೇಶ್ವರ್ (ದಲಿತ ಬಲ)
- ಪ್ರಿಯಾಂಕ ಖರ್ಗೆ (ದಲಿತ ಬಲ)
- ಕೆ.ಎಚ್. ಮುನಿಯಪ್ಪ (ದಲಿತ ಎಡ)
- ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್)
- ಸತೀಶ್ ಜಾರಕಿಹೊಳಿ (ಪರಿಶಿಷ್ಠ ಪಂಗಡ) (ವಾಲ್ಮಿಕಿ)
- ಜಮೀರ್ ಅಹ್ಮದ್ ಖಾನ್ (ಮುಸ್ಲಿಂ)
- ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ)



