ಬೆಂಗಳೂರು : 2023 ರ ಫೆಬ್ರವರಿಯಲ್ಲಿ ಮತ್ತೆ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇದ್ದ ಪದವೀಧರ ಶಿಕ್ಷಕರ ಹುದದೆಗಳ (6 ರಿಂದ 8 ನೇ ತರಗತಿ) ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಒಟ್ಟು 15 ಸಾವಿರ ಹುದ್ದೆಗಳಿಗೆ ನಡೆದ ನೇಮಕಾತಿಯಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಉಳಿದ 1,637 ಹುದ್ದೆಗಳಿಗೆ ಯಾವುದೇ ಅಭ್ಯರ್ಥಿಗಳು ಆಯ್ಕೆಯಾಗದ ಕಾರಣ ಆ ಹುದ್ದೆಗಳು ಖಾಲಿ ಉಳಿದಂತಾಗಿದೆ. 2023 ರ ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.



