ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ 1:2 ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಪಟ್ಟಿ ಇಂದೇ (ಸೆ. 27) ಪ್ರಕಟಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದಾರೆ.
15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿದ ಬಳಿಕ ಇಲಾಖೆಯು ಸಿಇಟಿ ನಡೆಸಿ ಈಗಾಗಲೆ ಅಭ್ಯರ್ಥಿಗಳ ಫಲಿತಾಂಶ ಪ್ರಕಟಿಸಿದೆ. ಶಿಕ್ಷಕರ ನೇಮಕಾತಿಗೆ ಆಯ್ಕೆ ಪಟ್ಟಿ ಸಿದ್ಧಪಡಿಸಿದ್ದು, ಇದೀಗ ಸಚಿವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಇಂದೇ ದಾಖಲಾತಿ ಪರಿಶೀಲನಾ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಹಿತಿ:
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ. ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ಪ್ರಕಟಿಸಲಾಗುತ್ತದೆ ಎಂದು ಬಿ.ಸಿ ನಾಗೇಶ್ ತಿಳಿಸಿದ್ದಾರೆ.
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ.
ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆhttps://t.co/vaplgMk0bF— B.C Nagesh (@BCNagesh_bjp) September 27, 2022
ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಪರಿಶೀಲನಾ ಪಟ್ಟಿ ನೋಡಲು ಈ ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ https://www.schooleducation.kar.nic.in/index.html.



