ಪ್ರಮುಖ ಸುದ್ದಿ
ನೇಮಕಾತಿ ನಿರೀಕ್ಷೆಯಲ್ಲಿದ್ದ 15 ಸಾವಿರ ಪದವೀಧರ ಶಿಕ್ಷಕರಿಗೆ ಶಾಕ್; ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿದ ಹೈಕೊರ್ಟ್

ಬೆಂಗಳೂರು: ನೇಮಕಾತಿ ನಿರೀಕ್ಷೆಯಲ್ಲಿದ್ದ 15 ಸಾವಿರ ಪದವೀಧರ ಶಿಕ್ಷಕರಿಗೆ ಹೈಕೋರ್ಟ್ ಶಾಕ್ ನೀಡಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಗೊಂದಲ ಹಿನ್ನೆಲೆ ತಾತ್ಕಾಲಿಕ ಅಯ್ಕೆ ಪಟ್ಟಿ ರದ್ದು ಮಾಡಿ ಹೈಕೊರ್ಟ್ ಆದೇಶ ಹೊರಡಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರೆಯಲಾಗಿದ್ದ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ, ದಾಖಲಾತಿ ಪರಿಶೀಲನೆ ಬಳಿಕ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.ಈ ಪಟ್ಟಿಯನ್ನು ಇದೀಗ ಕರ್ನಾಟಕ ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠವು ರದ್ದುಗೊಳಿಸಿದೆ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಗೊಂದಲ ಹಿನ್ನೆಲೆ ನೂರಾರೂ ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ಏಕ ಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.
ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರು ನ್ಯಾಯಾಲಯದ ಮುಂದೆ ವಾದಿಸಿ, ಪತಿಯ ಜಾತಿ, ಆದಾಯ ಪ್ರಮಾಣ ಪತ್ರವನ್ನು (ಪರಿಗಣಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಇದು ನಿಯಮ ಬಾಹಿರವಾಗಿದೆ. ಕಾನೂನು ಬಾಹಿರವಾಗಿರುವಂತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿದ್ದರು.
ತಂದೆಯ ಜಾತಿ, ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸುವಂತೆ ನ್ಯಾಯಪೀಠಕ್ಕೆ ಸೂಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆ ಪ್ರಕಟಿಸಿದ್ದಂತ 15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿದೆ.
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ...
ಈ ರಾಶಿಯವರ ವ್ಯಾಪಾರ ಉತ್ತಮವಾಗಿರುವುದರಿಂದ ಇನ್ನು ಬೇರೆ ಸ್ಥಳದಲ್ಲಿ ಹೊಸ ವ್ಯಾಪಾರ ಪ್ರಾರಂಭ, ಈ ರಾಶಿಯವರ ಮದುವೆ ವಿಳಂಬವೇಕೆ? ಮಂಗಳವಾರದ...
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಚಂಡಮಾರುತ ಸೃಷ್ಠಿಯಾಗಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ...
ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ, ಈ ರಾಶಿಯ ಗಂಡ ಹೆಂಡತಿ ಪುನರ್ಮಿಲನ, ಈ ರಾಶಿಯವರ ಮದುವೆ ವಿಳಂಬ, ಸೋಮವಾರದ ರಾಶಿ ಭವಿಷ್ಯ...
ಈ ರಾಶಿಯ ವ್ಯಾಪಾರಸ್ತರಿಗೆ ಅಧಿಕ ಲಾಭ, ಈ ರಾಶಿಯವರಿಗೆ ಖಾಯಂ ಉದ್ಯೋಗ, ಈ ರಾಶಿಯವರಿಗೆ ಮದುವೆ ವಿಳಂಬ, ಭಾನುವಾರದ ರಾಶಿ ಭವಿಷ್ಯ...