ಶೀಘ್ರವೇ 18, 500 ಶಿಕ್ಷಕರ ನೇಮಕ ; ಶಿಕ್ಷಣ ಸಚಿವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಶಿವಮೊಗ್ಗ : ಶೀಘ್ರವೇ 18, 500 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಇಲಾಖೆಯಲ್ಲಿ ಶಿಕ್ಷಣದ ಕೊರತೆಯನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡ್ಡಿಯಾಗದಂತೆ ತಕ್ಷಣದ ಕ್ರಮವಾಗಿ 13,000 ಶಿಕ್ಷಕರನ್ನು ನಿಯೋಜಿಸಲಾಗಿದೆ. ಅಲ್ಲದೇ ಶೀಘ್ರದಲ್ಲಿ 18500 ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.ಜಾತಿಗಣತಿಯನ್ನು ಅಕ್ಟೋಬರ್ ಮಾಸಾಂತ್ಯದೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಮಕ್ಕಳ ಕಲಿಕೆಗೆ ಅಡಚಣೆಯಾಗದಂತೆ ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ 800ಕ್ಕೆ ಹೆಚ್ಚಿಸುವ ಗುರಿ

ರಾಜ್ಯದಲ್ಲಿ ನೂತನವಾಗಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ ಸಂಖ್ಯೆಯನ್ನು 500 ರಿಂದ 800ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ ಸಂಖ್ಯೆಯ ಶಾಲೆಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ. ಅದಕ್ಕಾಗಿ ಸರ್ಕಾರ ಈಗಾಗಲೇ 3000 ಕೋ.ರೂ.ಗಳನ್ನು ವೆಚ್ಚ ಮಾಡಲಿದೆ. ಅಲ್ಲದೇ ಅಂತಹ ಆಯ್ದ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರೇತರ ಸಂಸ್ಥೆಗಳಿಂದ ಆರ್ಥಿಕ ನೆರವನ್ನು ಪಡೆದುಕೊಳ್ಳಲಾಗುವುದು. ಈಗಾಗಲೇ ಅನೇಕ ಸರ್ಕಾರೇತರ ಸಂಸ್ಥೆಗಳು ಆಸಕ್ತಿ ತೋರಿವೆ ಎಂದರು.

ಬೆಳೆ ಪರಿಹಾರ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ನಿರಂತರವಾಗಿ ಸುರಿದ ಬಾರೀ ಮಳೆಯಿಂದಾಗಿ ಸುಮಾರು 45000 ಹೆಕ್ಟೇರ್ ಪ್ರದೇಶ ಅಡಿಕೆಬೆಳೆ ಕೊಳೆರೋಗಕ್ಕೆ ತುತ್ತಾಗಿದೆ ಅಲ್ಲದೇ ಸಹಸ್ರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಯು ಹಾನಿಗೊಳಗಾಗಿದ್ದು, ಬೆಳೆನಷ್ಟದ ಪ್ರಮಾಣವನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬೆಳೆಹಾನಿಯ ಪ್ರಮಾಣ ಮತ್ತಷ್ಟು ಹೆಚ್ಚುವ ಸಂಭವವಿರುವ ಬಗ್ಗೆಯೂ ಮಾಹಿತಿ ಇದೆ. ಈಗಾಗಲೇ ಆಗಿರುವ ಬೆಳೆನಷ್ಟಕ್ಕೆ ಸಂಬಂಧಿಸಿದಂತೆ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಡಿಕೆ ಕೊಳೆರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅಲ್ಲದೇ ಸಂಭಾವ್ಯ ಬೆಳೆಹಾನಿಯನ್ನು ತಡೆಗಟ್ಟಲು ಇರುವ ಕ್ರಮಗಳ ಬಗ್ಗೆಯೂ ಮಾಹಿತಿ ಒದಗಿಸುವಂತೆ ಸೂಚಿಸಲಾಗಿದೆ ಎಂದರು.

ಬೆಳೆಹಾನಿಗೊಳಗಾಗಿರುವ ರೈತರಿಗೆ ಸಮಾಧಾನ ತರುವ ರೀತಿಯಲ್ಲಿ ಕೇಂದ್ರ ಸರ್ಕಾರವು ಪರಿಹಾರದ ಮೊತ್ತ ಘೋಷಿಸಬೇಕು. ಈಗಾಗಲೇ ಘೋಷಿಸಿರುವ ಮೊತ್ತ ಅತ್ಯಲ್ಪವಾಗಿದೆ. ಪರಿಹಾರಧನ ವಿತರಿಸುವ ವಿಷಯದಲ್ಲಿ ತಾರತಮ್ಯ ಧೋರಣೆ ಸರಿಯಲ್ಲ ಎಂದ ಅವರು, ತೆಂಗು ಅಭಿವೃಧ್ಧಿ ಮಂಡಳಿಯ ಶಾಖೆಯನ್ನು ಜಿಲ್ಲೆಯಲ್ಲಿ ಆರಂಭಿಸುವ ಬಗ್ಗೆಯೂ ಉದ್ದೇಶಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕೀಶ್ ಬಾನು, ಆರ್. ಪ್ರಸನ್ನಕುಮಾರ್, ಶ್ರೀನಿವಾಸ ಕರಿಯಣ್ಣ, ಕಲಗೋಡು ರತ್ನಾಕರ, ಕಲೀಂವುಲ್ಲಾ, ದೇವಿಕುಮಾರ್, ರಮೇಶ್, ಶೇಷಾದ್ರಿ, ರಮೇಶ್ಹೆಗ್ಡೆ, ಶರತ್ ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *