ಬೆಂಗಳೂರು : ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಯಾರು ಚಿತ್ರಮಂದಿರಕ್ಕೆ ಬರುತ್ತಿಲ್ಲ. ಹೀಗಾಗಿ ರಾಜ್ಯದಾದ್ಯಂತ ಶುಕ್ರವಾರದಿಂದ ಚಿತ್ರಮಂದಿರಗಳನ್ನು ಬಂದ್ ಮಾಡಲು ಪ್ರದರ್ಶಕರು ನಿರ್ಧರ ಕೈಗೊಂಡಿದ್ದಾರೆ.
ರಾಜ್ಯದಲ್ಲೊ ಕೊರೊನಾ ಎರಡನೇ ಅಲೆಯಿಂದ ಚಿತ್ರಮಂದಿರಕ್ಕೆ ಪ್ರೇಕ್ಷಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಹೀಗಾಗಿ ಶುಕ್ರವಾರದಿಂದ ರಾಜ್ಯಾದ್ಯಂತ ಚಿತ್ರಮಂದಿರಗಳನ್ನು ಬಂದ್ ಮಾಡಲಾಗುವುದು ಎಂದು ಪ್ರದರ್ಶಕರ ವಲಯದ ಅಧ್ಯಕ್ಷ ಕೆ. ಚಂದ್ರಶೇಖರ್ ಹೇಳಿದ್ದಾರೆ.
ರಾಜ್ಯದಲ್ಲಿ 650 ಕ್ಕೂ ಹೆಚ್ಚು ಚಿತ್ರಮಂದಿರಗಳು ಮುಚ್ಚಿವೆ. ಥಿಯೇಟರ್ ಗಳು ತೀವ್ರ ನಷ್ಟ ಅನುಭವಿಸುತ್ತಿವೆ. ಹೀಗಾಗಿ ಶುಕ್ರವಾರದಿಂದ ರಾಜ್ಯಾದ್ಯಂತ ಎಲ್ಲ ಚಿತ್ರಮಂದಿರ ಬಂದ್ ಆಗಲಿವೆ.



