Connect with us

Dvgsuddi Kannada | online news portal | Kannada news online

ರಾಜ್ಯ ಸರ್ಕಾರದಿಂದ ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ಪ್ರಕಟ; ಮುಸ್ಲಿಂ 2ಬಿ ಮೀಸಲಾತಿ ರದ್ದು, ಲಿಂಗಾಯತ, ಒಕ್ಕಲಿಗ ಸಮುದಾಯ ಮೀಸಲಾತಿ ಹೆಚ್ಚಳ

ಪ್ರಮುಖ ಸುದ್ದಿ

ರಾಜ್ಯ ಸರ್ಕಾರದಿಂದ ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ಪ್ರಕಟ; ಮುಸ್ಲಿಂ 2ಬಿ ಮೀಸಲಾತಿ ರದ್ದು, ಲಿಂಗಾಯತ, ಒಕ್ಕಲಿಗ ಸಮುದಾಯ ಮೀಸಲಾತಿ ಹೆಚ್ಚಳ

ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ. ಈಗಾಗಲೇ ವಿವಿಧ ಮೀಸಲಾತಿ ಬೇಡಿಕೆ ಈಡೇರಿಸಿರುವ ಬಿಜೆಪಿ ಸರ್ಕಾರ ದಶಕಗಳ ಒಳಮೀಸಲಾತಿ ಬೇಡಿಕೆ ಈಡೇರಿಸುವ ಮೂಲಕ ಚುನಾವಣಾ ಗೆಲ್ಲುವ ಕಾರ್ಯತಂತ್ರ ರೂಪಿಸಿದೆ.

ಇಂದು ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಎಸ್ಸಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ. ಎಸ್ಸಿ ಮೀಸಲಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ ಎಂದರು.

  • ಮೀಸಲಾತಿ ಹಂಚಿಕೆ ವಿವರ
  • ಗುಂಪು ಒಂದರಲ್ಲಿ ಆದಿಜಾಂಬವ ಸಮುದಾಯಕ್ಕೆ ಶೇ 6ರಷ್ಟು ಮೀಸಲಾತಿ
  • ಗುಂಪು 2 ರಲ್ಲಿ ಆದಿಕರ್ನಾಟಕ ಸಮುದಾಯಕ್ಕೆ ಶೇ 5.5ರಷ್ಟು ಮೀಸಲಾತಿ
  • ಗುಂಪು 3ರಲ್ಲಿ ಬಂಜಾರ, ಬೋವಿ, ಕೊರಚರಿಗೆ ಶೇ 4.5ರಷ್ಟು ಮೀಸಲಾತಿ
  • ಗುಂಪು 4ರಲ್ಲಿರುವ ಮತ್ತಿತರರಿಗೆ ಶೇ.1ರಷ್ಟು ಮೀಸಲಾತಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ
  • 2ಬಿ ಅಡಿ ಮುಸ್ಲಿಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು, ಅವರಿಗೆ ಆರ್ಥಿಕವಾಗಿ ಹಿಂದೂಳಿದ ವರ್ಗದ(EWS) ಅಡಿಯಲ್ಲಿ ಮೀಸಲಾತಿ ನೀಡಲಾಗುವುದು
  • 2 ಸಿ ಅಡಿ ಒಕ್ಕಲಿಗರಿಗೆ ಶೇಕಡಾ 6 ರಷ್ಟು ಮೀಸಲಾತಿ ಹಾಗೂ 2 ಡಿ ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ
  • ಎಸ್.ಟಿ. ಸಮುದಾಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲಾಗುತ್ತದೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top