Connect with us

Dvgsuddi Kannada | online news portal | Kannada news online

ರೈತರಿಗೆ ಮುಖ್ಯ ಮಾಹಿತಿ: ಆರ್.ಆರ್. ನಂಬರ್ -ಆಧಾರ್ ಜೋಡಣೆ ದಾಖಲೆಗಾಗಿ ಅಷ್ಟೇ: 10 ಎಚ್.ಪಿ. ವರೆಗಿನ ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೂ ವಿದ್ಯುತ್ ಕಡಿತ ಇಲ್ಲ: ಇಂಧನ ಸಚಿವ

ದಾವಣಗೆರೆ

ರೈತರಿಗೆ ಮುಖ್ಯ ಮಾಹಿತಿ: ಆರ್.ಆರ್. ನಂಬರ್ -ಆಧಾರ್ ಜೋಡಣೆ ದಾಖಲೆಗಾಗಿ ಅಷ್ಟೇ: 10 ಎಚ್.ಪಿ. ವರೆಗಿನ ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೂ ವಿದ್ಯುತ್ ಕಡಿತ ಇಲ್ಲ: ಇಂಧನ ಸಚಿವ

ಬಳ್ಳಾರಿ; ರಾಜ್ಯದಲ್ಲಿ ಐಪಿ ಸೆಟ್‌ ಆರ್‌.ಆರ್‌. ನಂಬರ್‌ಗೆ ಆಧಾರ್‌ ಸಂಖ್ಯೆ ಲಿಂಕ್‌ ಮಾಡುತ್ತಿರುವುದು ದಾಖಲಾತಿಗಾಗಿ ಮಾತ್ರವೇ ಹೊರತು ಬೇರೆ ಉದ್ದೇಶವಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, ಐಪಿ ಸೆಟ್ ಗಳ ಸಂಖ್ಯೆ ತಿಳಿದುಕೊಂಡು ಸಮರ್ಪಕ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಐಪಿ ಸೆಟ್ ಗಳ ಆರ್.ಆರ್.ನಂಬರ್ ಗೆ ಆಧಾರ್ ಸಂಖ್ಯೆ ಜೋಡಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 10 ಎಚ್.ಪಿ.ವರೆಗಿನ ಕೃಷಿ ಪಂಪ್ ಸೆಟ್ ಗಳಿಗೆ ಈಗಾಗಲೇ ಉಚಿತವಾಗಿ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ, ಅವುಗಳಿಗೆ ಎಷ್ಟು ವಿದ್ಯುತ್ ಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲದೆ ಗೊಂದಲ ಉಂಟಾಗುತ್ತಿದೆ. ಅಕ್ರಮ ಪಂಪ್ ಸೆಟ್ ಗಳಿಂದಾಗಿ ಸಕ್ರಮ ಪಂಪ್ ಸೆಟ್ ಗಳಿಗೂ ವಿದ್ಯುತ್ ಸಮಸ್ಯೆಯಾಗುತ್ತಿದೆ. ಐಪಿ ಸೆಟ್ ಗಳ ಆರ್.ಆರ್. ನಂಬರ್ ಗಳಿಗೆ ಆಧಾರ್ ಜೋಡಣೆ ಮಾಡಿದರೆ ಎಷ್ಟು ಪಂಪ್ ಸೆಟ್ ಗಳಿವೆ ಮತ್ತು ಅವುಗಳಿಗೆ ಎಷ್ಟು ವಿದ್ಯುತ್ ಬೇಕು ಎಂಬ ಸ್ಪಷ್ಟತೆ ಸಿಗುತ್ತದೆ. ಅದಕ್ಕೆ ತಕ್ಕಂತೆ ಸಮರ್ಪಕ ವಿದ್ಯುತ್ ಪೂರೈಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಬರಗಾಲದ ಸಂದರ್ಭದಲ್ಲೂ ರಾಜ್ಯದ ರೈತರಿಗೆ ದಿನದ ಏಳು ಗಂಟೆ ವಿದ್ಯುತ್ ಪೂರೈಸಲಾಗಿದೆ. ಲೋಡ್ ಶೆಡ್ಡಿಂಗ್ ಮಾಡಿಲ್ಲ. ಭವಿಷ್ಯದಲ್ಲಿ ಬೇಡಿಕೆಗೆ ತಕ್ಕಂತೆ ವಿದ್ಯುತ್ ಲಭ್ಯವಿರುತ್ತದೆ. ಆದರೂ ಬೇರೆ ಬೇರೆ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಈ ಸಮಸ್ಯೆ ಬಗೆಹರಿಸಿ ಸಮರ್ಪಕ ವಿದ್ಯುತ್ ಪೂರೈಕೆ ಉದ್ದೇಶದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿ ಬರುವ ಅಕ್ರಮ ಐಪಿ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು. ಅದಕ್ಕಿಂತ ಹೆಚ್ಚು ಅಂತರವಿರುವ ಕಡೆಗಳಲ್ಲಿ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಒದಗಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ. 30 ಮತ್ತು ರಾಜ್ಯ ಸರ್ಕಾರದಿಂದ ಶೇ. 50 ಸಬ್ಸಿಡಿ ನೀಡಲಾಗುತ್ತದೆ. ರೈತರು ಶೇ. 20ರಷ್ಟು ಮೊತ್ತ ಭರಿಸಿ ಪಂಪ್ ಸೆಟ್ ಹಾಕಿಸಿಕೊಳ್ಳಬಹುದು”, ಎಂದು ತಿಳಿಸಿದರು.

ರಾಜದ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ರಮ ಪಂಪ್ ಸೆಟ್ ಗಳಿವೆ. ಕೆಲವರು ಇಂತಹ ಅಕ್ರಮ ಪಂಪ್ ಸೆಟ್ ಗಳ ಮೂಲಕ ನದಿ ಮತ್ತು ಕಾಲುವೆಗಳಿಂದ ಅನುಮತಿ ಇಲ್ಲದೆ ನೀರು ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ 10 ಅಶ್ವಶಕ್ತಿಗಿಂತ ಹೆಚ್ಚು ಸಾಮರ್ಥ್ಯದ ಅಕ್ರಮ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಆದರೆ, 10 ಅಶ್ವಶಕ್ತಿವರೆಗಿನ ವಿದ್ಯುತ್ ಪಂಪ್ ಸೆಟ್ ಗಳಿಗೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ವಿದ್ಯುತ್ ಪೂರೈಕೆ ಮುಂದುವರಿಯಲಿಗೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ನದಿ ಮತ್ತು ಕಾಲುವೆಗಳಿಂದ ಅಕ್ರಮ ಪಂಪ್ ಸೆಟ್ ಗಳ ಮೂಲಕ ನೀರು ಮೇಲೆತ್ತುವವರ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಜಲ ಸಂಪನ್ಮೂಲ ಇಲಾಖೆಯಿಂದ ಬೇಡಿಕೆ ಬಂದಿದೆ. ಆದರೆ, 10 ಅಶ್ವಶಕ್ತಿವರೆಗಿನ ಪಂಪ್ ಸೆಟ್ ಗಳ ಸಂಪರ್ಕ ಕಡಿತಗೊಳಿಸುವುದಿಲ್ಲ. ಅದಕ್ಕಿಂತ ಹೆಚ್ಚು ಅಶ್ವಶಕ್ತಿಯ ಪಂಪ್ ಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ವಿದ್ಯುತ್ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗುವುದು. ಡೀಸೆಲ್ ಪೆಪ್ ಸೆಟ್ ಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಶಾಸಕರಾದ ಕಂಪ್ಲಿ ಗಣೇಶ್, ಬಿ.ಎಂ.ನಾಗರಾಜ್, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top