Connect with us

Dvgsuddi Kannada | online news portal | Kannada news online

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಹೋಟೆಲ್, ಸ್ವಯಂ ಉದ್ಯೋಗ ಸಾಲ, ಸ್ವಾವಲಂಬಿ ಸಾರಥಿಸೇರಿ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ್ ಮೊಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯ ಒದಗಿಸಲಾಗುವುದು.

ಅರ್ಹತೆ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು. (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು),ಅರ್ಜಿದಾರರು ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಅಸಕ್ತರು ಅರ್ಜಿ ಸಲ್ಲಿಸಲು ಆ.31 ರೊಳಗೆ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್ https://kmcdc.karnataka.gov.in ಇಲ್ಲಿ ಸಂಪರ್ಕಿಸಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು ಅಭಿವೃದ್ಧಿ ಕರ್ನಾಟಕ ಮರಾಠ ಸಮುದಾಯಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top