Connect with us

Dvgsuddi Kannada | online news portal | Kannada news online

ಶೀಘ್ರವೇ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂ: ಇಂಧನ ಸಚಿವ

ಪ್ರಮುಖ ಸುದ್ದಿ

ಶೀಘ್ರವೇ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂ: ಇಂಧನ ಸಚಿವ

ಬೆಂಗಳೂರು: ಶೀಘ್ರವೇ ರಾಜ್ಯದ 3,854 ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆಯನ್ಬು ಕಾಯಂ ಮಾಡಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು ರಾಜ್ಯದಲ್ಲಿ 2004 ರಿಂದ ಗ್ರಾಮ ವಿದ್ಯುತ್ ಸಹಾಯಕರಾಗಿ ಕೆಲಸ ಮಾಡುತ್ತಿರುವ 3,854 ಮಂದಿ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವೆ ಕಾಯಂಗೊಳಿಸಲು ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಸಮಾಲೋಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಈಗಾಗಲೇ ಗ್ರಾಮ ವಿದ್ಯುತ್ ಪ್ರತಿನಿಧಿಗಳ ವೇತನವನ್ನು 12 ಸಾವಿರ ರೂ.ಗಳಿಂದ 16,320 ರೂ.ಗಳಿಗೆ ಹೆಚ್ಚಳ ಮಾಡಲಾಗಿದ್ದು, ಜೊತೆಗೆ ಮಾಸಿಕ 4 ಸಾವಿರ ರೂ. ಹೆಚ್ಚುವರಿ ಪ್ರೋತ್ಸಾಹಧನ ಹಾಗೂ 2 ಜೊತೆ ಸಮವಸ್ತ್ರ ವೆಚ್ಚ ಭರಿಸಲಾಗುತ್ತಿದೆ ಎಂದು ಹೇಳಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top