ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿಭತ್ಯೆಯನ್ನು ನಾಲ್ಕೂ ಸಾರಿಗೆ ನಿಗಮಗಳಿಗೂ ಅನ್ವಯವಾಗುವಂತೆ ಶೇ.21.50ರಿಂದ ಶೇ.24.50ಕ್ಕೆ ಹೆಚ್ಚಿಸಿ ಆದೇಶಿಸಿರುತ್ತದೆ.
ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರ ಸುತ್ತೋಲೆ ಹೊರಡಿಸಿದ್ದು, ಜುಲೈ ತಿಂಗಳಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.21.50ರಿಂದ ಶೇ.24.50ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಸಾರಿಗೆ ನಿಗಮದಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ, ಪಾವತಿಸಲು ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.ಇದರಿಂದ ನಾಲ್ಕೂ ನಿಗಮಗಳ ಸಾರಿಗೆ ನಿಗಮಗಳಲ್ಲಿ ತುಟ್ಟಿಭತ್ಯೆ ದರವನ್ನು ಶೇ.21.50ರಿಂದ ಶೇ.24.50ಕ್ಕೆ ಹೆಚ್ಚಳವಾಗಲಿದೆ.