Connect with us

Dvgsuddi Kannada | online news portal | Kannada news online

ವಾಹನಗಳಿಗೆ HSR ನಂಬರ್ ಪ್ಲೇಟ್ ಅಳವಡಿಕೆ ; ಮತ್ತೆ ಮೂರು ತಿಂಗಳು ಗಡುವು ವಿಸ್ತರಣೆ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

IMG 20240212 092600

ಪ್ರಮುಖ ಸುದ್ದಿ

ವಾಹನಗಳಿಗೆ HSR ನಂಬರ್ ಪ್ಲೇಟ್ ಅಳವಡಿಕೆ ; ಮತ್ತೆ ಮೂರು ತಿಂಗಳು ಗಡುವು ವಿಸ್ತರಣೆ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: 2019ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅಳವಡಿಸಿಕೊಳ್ಳುವ ಕೊನೆಯ ದಿನ ಫೆ.17ರ ಬದಲು, ಮತ್ತೆ ಮೂರು ತಿಂಗಳ ವರೆಗೆ ವಿಸ್ತರಣೆ ಮಾಡುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು.

ಸದಸ್ಯ ಮಧು.ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದರು.

ಅತಿ ಸುರಕ್ಷತಾ ನೋಂದಣಿ ಫಲಕಗಳ ಯೋಜನೆಯನ್ನು ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ. ಇದರಿಂದಾಗಿ ವಾಹನಗಳನ್ನು ಬಳಸಿಕೊಂಡು ಅಪರಾಧ ಎಸಗುವುದನ್ನು ತಡೆಗಟ್ಟುವುದರ ಜೊತೆಗೆ ರಸ್ತೆಯ ಮೇಲೆ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನೋಂದಣಿ ಫಲಕವು ಅಲ್ಯೂಮಿನಿಯಂನಿಂದ ನಿರ್ಮಿತವಾದ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಇದಾಗಿದೆ. ಮರುಬಳಕೆ ಮಾಡಲಾಗದ ಎರಡು ಲಾಕ್‍ಗಳನ್ನು ಬಳಸಿಕೊಂಡು ವಾಹನದ ಮೇಲೆ ಅಳವಡಿಸಲಾಗುತ್ತದೆ. 20 ಎಂ.ಎಂ 20 ಎಂಎಂ ಗಾತ್ರದ ಚಕ್ರದ ಕ್ರೋಮಿಯಂ ಆಧಾರಿತ ಹೋಲೊಗ್ರಾಮ್‍ನ್ನು ಹಿಂಭಾಗ ಹಾಗೂ ಮುಂಭಾಗ ಎರಡು ಪ್ಲೇಟ್‍ಗಳ ಮೇಲಿನ ಎಡ ಮೂಲೆಯಲ್ಲಿ ಬಿಸಿ ಟ್ಯಾಪಿಂಗ್ ಮೂಲಕ ಅಳವಡಿಸಲಾಗುತ್ತದೆ.

ಇದು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು, ಇಲಾಖೆಯ ಅಧಿಕೃತ ವೆಬ್‍ಸೈಟ್ ಬಳಸಿಕೊಂಡು ಆನ್‍ಲೈನ್ ಮೂಲಕವೇ ವಾಹನ ಸವಾರರು ನೋಂದಣಿ ಮಾಡಿಕೊಳ್ಳಬಹುದೆಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಯಾವುದೇ ಕಾರಣಕ್ಕೂ ವಾಹನ ಸವಾರರು, ಆರ್‍ಟಿಒ ಕಚೇರಿ ಇಲ್ಲವೇ ಬೇರೊಂದು ಕಡೆ ನಗದು ಕೊಟ್ಟು ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಅಗತ್ಯವಿಲ್ಲ. ಇದು ನಗದು ರಹಿತ ಮತ್ತು ಆನ್‍ಲೈನ್ ಮೂಲಕ ನಡೆಯುವ ಪ್ರಕ್ರಿಯೆ ಆಗಿದೆ. ಒಂದು ವೇಳೆ ಯಾರಾದರೂ ನಕಲಿ ವೆಬ್‍ಸೈಟ್ ಬಳಸಿಕೊಂಡು ನೋಂದಣಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಕೊಟ್ಟರು.

2019 ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ವಾಹನಗಳುಗೆ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (High Security registration number plate-HSRP) ಅಳವಡಿಕೆ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿತ್ತು. ಫೆಬ್ರವರಿ 17 ಕೊನೆಯ ದಿನವಾಗಿತ್ತು.

HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?
ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನೆಯ ದಿನ. ಬಳಿಕ ದುಬಾರಿ ದಂಡ ಪಾವತಿ ತಲೆನೋವು ಶುರುವಾಗಲಿದೆ. ನಕಲಿ ನಂಬರ್ ಪ್ಲೇಟ್, ವಾಹನಗಳನ್ನು ಕಾನೂನು ಬಾಹಿರ ಚಟುವಟಿಕೆಗೆ ಬಳಕೆ ಮಾಡುವುದನ್ನು ತಪ್ಪಿಸಲು ಹಾಗೂ ವಾಹನಗಳನ್ನು ಟ್ರಾಕ್ ಮಾಡಲು ಸೇರಿದಂತೆ ಹಲವು ಕಾರಣಗಳಿಂದ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಗತ್ಯವಾಗಿದೆ. ಈ ನಂಬರ್ ಪ್ಲೇಟ್ ಎಲ್ಲೆಂದರಲ್ಲಿ ಸಿಗುವುದಿಲ್ಲ. ಮಧ್ಯವರ್ತಿಗಳ ಅವಶ್ಯಕತೆ ಇಲ್ಲ. ಆನ್ ಲೈನ್ ನಲ್ಲಿ ಬುಕ್ ಮಾಡಿಕೊಂಡು ಸುಲಭವಾಗಿ HSRP ನಂಬರ್ ಪ್ಲೇಟ್ ಪಡೆಯಲು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

2019ರ ಎಪ್ರಿಲ್‌ಗೂ ಮೊದಲು ರಿಜಿಸ್ಟ್ರೇಶನ್ ಆಗಿರುವ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯವಾಗಿದೆ. 2019ರ ಎಪ್ರಿಲ್ ಬಳಿಕ ರಿಜಿಸ್ಟ್ರೇಶನ್ ಆಗಿರುವ ವಾಹನಗಳಿಗೆ ಹಾಕಲಾಗಿರುವ ನಂಬರ್ ಪ್ಲೇಟ್ HSRP ಆಗಿದೆ. ಹೀಗಾಗಿ ಯಾರ ವಾಹನ ಎಪ್ರಿಲ್ 2019ರ ಮೊದಲ ರಿಜಿಸ್ಟ್ರೇಶನ್ ಆಗಿದೆಯೋ ಆ ವಾಹನಗಳ ಮಾಲೀಕರು HSRP ನಂಬರ್ ಪ್ಲೇಟ್ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು. HSRP ನಂಬರ್ ಪ್ಲೇಟ್ ಬುಕಿಂಗ್‌ನಲ್ಲಿ ನಗದು ವ್ಯವಹಾರವಿಲ್ಲ. ಆನ್‌ಲೈನ್ ಮೂಲಕವೇ ಬುಕಿಂಗ್, ಆನ್‌ಲೈನ್ ಮೂಲಕವೇ ಪಾವತಿ ಮಾಡಬೇಕು.

ಕರ್ನಾಟಕದಲ್ಲಿ ವಾಹನ ಮಾಲೀಕರು HSRP ನಂಬರ್ ಪ್ಲೇಟ್ ಬುಕ್ ಮಾಡಲು https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು.

  • ಅರ್ಜಿ ಭರ್ತಿ ಮಾಡುವ ವಿಧಾನ
  • Book HSRP ಕ್ಲಿಕ್ ಮಾಡಿ
  • ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿಕೊಳ್ಳಿ
  • ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿ
  • ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿ
  • HSRP ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ
  • ಮೊಬೈಲ್ ನಂಬರ್‌ಗೆ ಬರವ ಒಟಿಪಿ ನಮೂದಿಸಿ
  • HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಳ್ಳಿ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

davangere lokayukta 2
Morarji Desai school 1
davangere lokayukta visit 1
lokayukta visit
grama Panchayti 1
Advertisement
Advertisement Enter ad code here

Title

To Top